Gas Cylinder Explosion : ಗ್ಯಾಸ್ ಸಿಲಿಂಡರ್ ಸ್ಫೋಟ : ಇಬ್ಬರು ಸಜೀವ ದಹನ

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ಕಾಪು ಮುಲ್ಲಾರು ಬಳಿ ಗುಜರಿ ಅಂಗಡಿಯಲ್ಲಿ ನಡೆದಿದೆ.

Written by - Channabasava A Kashinakunti | Last Updated : Mar 21, 2022, 03:42 PM IST
  • ಗ್ಯಾಸ್ ಸಿಲಿಂಡರ್ ಸ್ಫೋಟದ ತೀವ್ರತೆಗೆ ಇಬ್ಬರು ಸಜೀವ ದಹನ
  • ಕಾಪು ಮುಲ್ಲಾರು ಬಳಿ ಗುಜರಿ ಅಂಗಡಿಯಲ್ಲಿ ನಡೆದಿದೆ.
  • ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ತಂಡ
Gas Cylinder Explosion : ಗ್ಯಾಸ್ ಸಿಲಿಂಡರ್ ಸ್ಫೋಟ : ಇಬ್ಬರು ಸಜೀವ ದಹನ title=

ಉಡುಪಿ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ಕಾಪು ಮುಲ್ಲಾರು ಬಳಿ ಗುಜರಿ ಅಂಗಡಿಯಲ್ಲಿ ನಡೆದಿದೆ.

ಗ್ಯಾಸ್ ಸ್ಫೋಟ(Gas cylinder explosion)ದಲ್ಲಿ ರಜಾಕ್ ಮತ್ತು ರಜಬ್ ಅಂಗಡಿಯಲ್ಲಿ ಸಜೀವವಾಗಿ ದಹನವಾಗಿದ್ದಾರೆ. ಅಲ್ಲದೆ, ಗುಜರಿ ಅಂಗಡಿಯಲ್ಲಿದ್ದ ಮೂವರು ಪಾಲುದಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಫ್ರಿಜ್ ಸಹಿತ ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಉಡುಪಿ ಅಗ್ನಿಶಾಮಕ ದಳದ ತಂಡದ ಎರಡು ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಇದನ್ನು ಓದಿ : ಮನೆಯ ಮುಂದೆ ಬಂದು ಬಾಳೆ ಗಿಡ ತಿಂದು ಮುಗಿಸಿದ ಒಂಟಿಸಲಗ : Viral video

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News