ಸಿಎಂ ಪತ್ನಿಗೆ ಮೂಡಾ ನಿವೇಶನ ಹಂಚಿಕೆ: ಸ್ವಾಧೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ: ಸಿಎಂ ಸ್ಪಷ್ಟನೆ

ಬಿಜೆಪಿ ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ

Written by - Prashobh Devanahalli | Last Updated : Jul 2, 2024, 03:55 PM IST
    • ಧರ್ಮಪತ್ನಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದೆ
    • ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು
    • ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ
ಸಿಎಂ ಪತ್ನಿಗೆ ಮೂಡಾ ನಿವೇಶನ ಹಂಚಿಕೆ: ಸ್ವಾಧೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ: ಸಿಎಂ ಸ್ಪಷ್ಟನೆ title=
File Photo

ಬೆಂಗಳೂರು: ಮುಖ್ಯಮಂತ್ರಿಗಳ ಧರ್ಮಪತ್ನಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ:  RCB ತಂಡಕ್ಕೆ ವಿರಾಟ್ ಕೊಹ್ಲಿ ನಾಯಕ! ಮತ್ತೆ ಕ್ಯಾಪ್ಟನ್ ಆಗ್ತಾರಾ ಕಿಂಗ್?

ಬಿಜೆಪಿ ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು.  ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿ ಹಿಂದೂಗಳ ಕ್ಷಮೆ ಕೇಳಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹ

ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News