Geetha Shivarajkumar: 'ಜೆಡಿಎಸ್'ಗೆ ಮತ್ತೊಂದು ಬಿಗ್ ಶಾಕ್: ಡಿಕೆಶಿ ಭೇಟಿಯಾದ ಶಿವರಾಜ್ ಕುಮಾರ್ ಪತ್ನಿ!

ಪತ್ನಿ ಗೀತಾ ಶಿವರಾಜ್ ಕುಮಾರ್ ನನ್ನು ಜೆಡಿಎಸ್ ಗೆ ಗುಡ್ ಬೈ ಹೇಳಿಸಿ, ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚಿಸಿದ್ದಾರೆ

Last Updated : Mar 15, 2021, 12:22 PM IST
  • ಈಗಾಗಲೇ ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಲು ಅಂತಿಮ ಸಿದ್ಧತೆಯಲ್ಲಿರುವಂತ ಮಧು ಬಂಗಾರಪ್ಪ
  • ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ
  • ಪತ್ನಿ ಗೀತಾ ಶಿವರಾಜ್ ಕುಮಾರ್ ನನ್ನು ಜೆಡಿಎಸ್ ಗೆ ಗುಡ್ ಬೈ ಹೇಳಿಸಿ, ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚಿಸಿದ್ದಾರೆ
Geetha Shivarajkumar: 'ಜೆಡಿಎಸ್'ಗೆ ಮತ್ತೊಂದು ಬಿಗ್ ಶಾಕ್: ಡಿಕೆಶಿ ಭೇಟಿಯಾದ ಶಿವರಾಜ್ ಕುಮಾರ್ ಪತ್ನಿ! title=

ಬೆಂಗಳೂರು: ಈಗಾಗಲೇ ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಲು ಅಂತಿಮ ಸಿದ್ಧತೆಯಲ್ಲಿರುವಂತ ಮಧು ಬಂಗಾರಪ್ಪ, ಜೆಡಿಎಸ್ ಗೆ ಶಾಕ್ ನೀಡಿದ್ದರು. ಇವರ ಬಳಿಕ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಪತ್ನಿ ಗೀತಾ ಶಿವರಾಜ್ ಕುಮಾರ್ ನನ್ನು ಜೆಡಿಎಸ್ ಗೆ ಗುಡ್ ಬೈ ಹೇಳಿಸಿ, ಕಾಂಗ್ರೆಸ್ ಸೇರ್ಪಡೆ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಜೆಡಿಎಸ್ ಗೆ ಮತ್ತೊಂದು ಶಾಕ್ ನೀಡಿದ್ದಾರೆ.

ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರುತ್ತಿರುವುದಾಗಿ ಮಧು ಬಂಗಾರಪ್ಪ ಘೋಷಿಸಿದ್ದರು. ಅಲ್ಲದೇ ತನ್ನೊಂದಿಗೆ ತನ್ನ ಅಕ್ಕ ಗೀತಾ ಶಿವರಾಜ್ ಕುಮಾರ್(Geetha Shivarajkumar) ಕಾಂಗ್ರೆಸ್ ಸೇರಲಿದ್ದಾರೆ ಎಂಬುದಾಗಿಯೂ ಘೋಷಿಸಿದ್ದರು. ಇದಾದದ ಬಳಿಕ, ಇಂದು ನಟ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ತೀವ್ರ ಕುತೂಹಲ ಮೂಡಿಸಿದೆ.

Siddaramaiah: 'ಇನ್ಮುಂದೆ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸಾಧ್ಯವೇ ಇಲ್ಲ'

ತಮ್ಮ ಪತ್ನಿ ಗೀತಾ ಅವರಿಂದ ಜೆಡಿಎಸ್ ಗೆ ಗುಡ್ ಬೈ ಹೇಳಿಸಿ, ಕಾಂಗ್ರೆಸ್ ಸೇರಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಅವರೊಂದಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಮೂಲಕ ಗೀತಾ ಶಿವರಾಜ್ ಕುಮಾರ್ ಕೂಡ ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿ, ಸದ್ಯದಲ್ಲೇ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿತ್ತಿದೆ.

CD Case: 'ಯುವತಿಗೆ ಅನ್ಯಾಯವಾಗಿದ್ದರೆ ಹೊರಬಂದು ದೂರು ನೀಡಲಿ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News