ಬೆಡ್ ಶೀಟ್ ವಿಚಾರಕ್ಕೆ ಗಲಾಟೆ, ಮಗಳಿಗೆ ಬುದ್ದಿಮಾತು ಹೇಳಿದ ಅಪ್ಪ..! ಮನನೊಂದು ಯುವತಿ ಆತ್ಮಹತ್ಯೆ

ಬುದ್ದಿಮಾತಿಗೆ ಮಗಳು ಆತ್ಮಹತ್ಯೆ ಮಾಡಿಕೊಂಡ ಕಾರಣ ಫೋಷಕರು ಕಂಗಾಲಾಗಿದ್ದಾರೆ. ಇನ್ನೂ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.. ಅಷ್ಟಕ್ಕೂ ಆಗಿದ್ದೇನು..?..

Written by - Krishna N K | Last Updated : Oct 19, 2024, 03:00 PM IST
    • ತಂದೆ ಬುದ್ಧಿ ಮಾತು ಹೇಳಿದ್ದಕ್ಕೆ ಮನನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
    • ಬೆಂಗಳೂರಿನ ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ
    • ಶ್ರಾವ್ಯಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಬೆಡ್ ಶೀಟ್ ವಿಚಾರಕ್ಕೆ ಗಲಾಟೆ, ಮಗಳಿಗೆ ಬುದ್ದಿಮಾತು ಹೇಳಿದ ಅಪ್ಪ..! ಮನನೊಂದು ಯುವತಿ ಆತ್ಮಹತ್ಯೆ title=

ಬೆಂಗಳೂರು : ಮನೆಯಲ್ಲಿ ತಂದೆ ಬುದ್ಧಿ ಮಾತು ಹೇಳಿದ್ದಕ್ಕೆ ಮನನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ‌. ಚಾಮರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ  ನಡೆದಿದ್ದು,ಶ್ರಾವ್ಯಾ ಡಿ (19) ಮೃತ ಯುವತಿಯಾಗಿದ್ದಾಳೆ.

ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಶ್ರಾವ್ಯಾ ಮನೆಯಲ್ಲಿ ತಂದೆ- ತಾಯಿ ಜಗಳದ ವಿಚಾರವಾಗಿ ನೊಂದಿದ್ದಳು ಎನ್ನಲಾಗಿದೆ. ಅದಲ್ಲದೆ ಶುಕ್ರವಾರ ರಾತ್ರಿ ಮಲಗುವಾಗ ಬೆಡ್ ಶೀಟ್ ವಿಚಾರಕ್ಕೆ ಶ್ರಾವ್ಯಾ ಹಾಗೂ ಆಕೆಯ ಸಹೋದರಿ ನಡುವೆ ಗಲಾಟೆಯಾಗಿತ್ತು. ಆ ಸಂದರ್ಭದಲ್ಲಿ ಶ್ರಾವ್ಯಾಳ ತಂದೆ ಆಕೆಗೆ ಬೈದು ಬುದ್ಧಿವಾದ ಹೇಳಿದ್ದಾರೆ. ಇದರಿಂದ ಬೇಸತ್ತ ಶ್ರಾವ್ಯಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ:ಈ ಫೋಟೋದಲ್ಲಿರುವ ಸುಂದರಿಯರಲ್ಲಿ ಅಮ್ಮ ಯಾರು.. ಮಗಳು ಯಾರು..? ಹೇಳಿ ನೋಡೋಣ..

ಬುದ್ದಿಮಾತಿಗೆ ಮಗಳು ಆತ್ಮಹತ್ಯೆ ಮಾಡಿಕೊಂಡ ಕಾರಣ ಫೋಷಕರು ಕಂಗಾಲಾಗಿದ್ದಾರೆ. ಇನ್ನೂ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಶ್ರಾವ್ಯಾ ಆತ್ಮಹತ್ಯೆ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News