ಬೆಂಗಳೂರು : ಹೆಬ್ಬಾಳದ ಬಳಿ ಶಾಲಾ ಬಾಲಕಿಯೊಬ್ಬಳು ಬಿಬಿಎಂಪಿ ಕಸದ ಲಾರಿಗೆ ಬಲಿ ಪಡೆದ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy), ಗಬ್ಬೆದ್ದು ಹೋಗಿರುವ ಪಾಲಿಕೆಯನ್ನು ಮೊದಲು ಸ್ವಚ್ಚ ಮಾಡಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ : BBMP ಲಾರಿ ಹರಿದು ಬಾಲಕಿ ಸಾವು: 2 ಲಕ್ಷ ರೂ. ವೈಯಕ್ತಿಕ ಪರಿಹಾರ ಘೋಷಿಸಿದ ಭೈರತಿ ಸುರೇಶ್
ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ನೂರು ವರ್ಷ ಬಾಳಿ ಬದುಕಬೇಕಿದ್ದ ಬಾಲಕಿ ಬಲಿಯಾಗಿದ್ದಾಳೆ.
ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ನೂರು ವರ್ಷ ಬಾಳಿ ಬದುಕಬೇಕಿದ್ದ ಬಾಲಕಿ ಬಲಿಯಾಗಿದ್ದಾಳೆ. 1/4
— H D Kumaraswamy (@hd_kumaraswamy) March 21, 2022
ಭಾನುವಾರದಂದು ಬೆಂಗಳೂರಿನಲ್ಲಿ(Bengaluru) ಸುರಿದ ಮಳೆಯಿಂದ ಆ ಫ್ಲೈ ಓವರ್ ಅಂಡರ್ ಪಾಸ್ ನಲ್ಲಿ ನೀರು ತುಂಬಿತ್ತು. ಹೀಗಾಗಿ ಮಕ್ಕಳು ಅಂಡರ್ ಪಾಸ್ ನಲ್ಲಿ ಹೋಗದೆ ರಸ್ತೆ ಮೂಲಕ ದಾಟುತ್ತಿದ್ದರು. ಆ ಸಂದರ್ಭದಲ್ಲಿ ದುರಂತ ಘಟಿಸಿದೆ.
ಸ್ವತಃ ಗೌರವಾನ್ವಿತ ಹೈ ಕೋರ್ಟ್(High Court) ಛೀಮಾರಿ ಹಾಕಿದ್ದರೂ, ಎಂಜಿನಿಯರುಗಳನ್ನು ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ನೀಡಿದ್ದರೂ ಎಮ್ಮೆ ಚರ್ಮದ ಪಾಲಿಕೆ ಪಾಠ ಕಲಿತಿಲ್ಲ. ಬಿಬಿಎಂಪಿ ಆಟಗಳಿಗೆ ಸೀಟಿ ಹೊಡೆಯುತ್ತಾ, ಅಲ್ಲಿನ ಅದಕ್ಷ ಅಧಿಕಾರಿಗಳನ್ನು ಪೊರೆದು ಪೋಷಣೆ ಮಾಡುತ್ತಿರುವ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲವಾಗಿದೆ.
ಇದನ್ನೂ ಓದಿ : K Sudhakar : ಉಕ್ರೇನ್ ನಿಂದ ಬಂದ ವೈದ್ಯ ವಿದ್ಯಾರ್ಥಿಗಳಿಗೆ 'ಭರ್ಜರಿ ಸಿಹಿ ಸುದ್ದಿ' ನೀಡಿದ ಸಚಿವ ಸುಧಾಕರ್
ಬೆಂಗಳೂರು ನಗರದ ಗೌರವ, ಪ್ರತಿಷ್ಠೆ ಹಾಳು ಮಾಡುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಅಲ್ಲಿಂದ ಹೊರಹಾಕಿ ಬಿಬಿಎಂಪಿ(BBMP)ಯನ್ನು ಮೊದಲು ಸ್ವಚ್ಚಗೊಳಿಸಬೇಕಿದೆ. ಅಲ್ಲಿಂದಲೇ ಬೆಂಗಳೂರಿನ ಸ್ವಚ್ಚತೆ ಆರಂಭವಾಗಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.