ಬೆಂಗಳೂರು: ರಾಜ್ಯದ ಜನತೆಗೆ ಪೊಲೀಸ್ ಇಲಾಖೆಯಿಂದ ಶುಭ ಸುದ್ದಿ ನೀಡಿದೆ. ದಾಖಲೆಗಳ ಪರಿಶೀಲನೆಗೆ ಸುಖಾಸುಮ್ಮನೆ ವಾಹನ ತಡೆಯದಂತೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಮತ್ತೊಮ್ಮೆ ಆದೇಶ ಹೊರಡಿಸಿದ್ದಾರೆ.
ವಾಹನ ತಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಆದೇಶ ಹೊರಡಿಸಿರುವ ಪ್ರವೀಣ್ ಸೂದ್, ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸದಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಡಾಕ್ಯುಮೆಂಟ್ ಪರಿಶೀಲನೆಗೆ ವಾಹನ ಸವಾರರನ್ನ ನಿಲ್ಲಿಸಬೇಡಿ, ಡ್ರಂಕ್ & ಡ್ರೈವ್, ಕಣ್ಣಿಗೆ ಕಾಣುವಂತ ನಿಯಮ ಉಲ್ಲಂಘನೆ ಕಂಡರೆ ಮಾತ್ರ ವಾಹನ ನಿಲ್ಲಿಸಬೇಕು. ಪಟ್ಟಣ ಮತ್ತು ಹೆದ್ದಾರಿಗಳಲ್ಲಿ ಎಲ್ಲಾ ಕಡೆ ಈ ಸೂಚನೆ ಅನುಸರಿಸಬೇಕು.
ಇದನ್ನೂ ಓದಿ-DGCA Latest Rule: ಇನ್ನು ವೈದ್ಯರ ಸರ್ಟಿಫಿಕೆಟ್ ಇದ್ದರೆ ಇವರು ವಿಮಾನ ಹತ್ತಬಹುದು
ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಸೂದ್ ಲಿಖಿತ ಆದೇಶ ಹೊರಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ