ಶ್ರೀ ಶಿವಕುಮಾರ ಸ್ವಾಮೀಜಿ ನಿಧನ; ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಸಿದ್ದಗಂಗಾಶ್ರೀ ಲಿಂಗಕೈರಾದ  ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ನಡೆಯಲಿದೆ.

Last Updated : Jan 21, 2019, 03:49 PM IST
ಶ್ರೀ ಶಿವಕುಮಾರ ಸ್ವಾಮೀಜಿ ನಿಧನ; ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ title=

ಬೆಂಗಳೂರು: ಶ್ರೀ ಸಿದ್ಧಗಂಗಾ ಮಠದ ಶತಾಯುಷಿ ಶ್ರೀ ಶಿವಕುಮಾರ ಸ್ವಾಮಿಜಿ ನಿಧನದ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯಾದ್ಯಂತ ಶಾಲಾ -ಕಾಲೇಜುಗಳಿಗೆ, ಕಚೇರಿಗಳಿಗೆ ಸರ್ಕಾರಿ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

ಕಳೆದ ಎರಡು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶತಾಯಿಷಿ, ನಡೆದಾಡುವ ದೇವರು ಎಂದೇ ಖ್ಯಾತರಾದ, ತ್ರಿವಿಧ ದಾಸೋಹ ತತ್ವದ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದ ಡಾ.ಸಿದ್ದಗಂಗಾ ಸ್ವಾಮೀಜಿಗಳು ಇಂದು ಬೆಳಿಗ್ಗೆ 11.44ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸಿದ್ದಗಂಗಾಶ್ರೀ ಲಿಂಗಕೈರಾದ  ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ದಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಂಗಳವಾರ ಮಧ್ಯಾಹ್ನ 4.30ಕ್ಕೆ ಸ್ವಾಮೀಜಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ತದನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ.
 

Trending News