ತಮಿಳುನಾಡಿಗೆ ನೀರು ಬಿಡಲು ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು CWRC ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು.

Written by - Prashobh Devanahalli | Edited by - Bhavishya Shetty | Last Updated : Jul 12, 2024, 05:36 PM IST
    • ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು
    • ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು
    • CWMAಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ ಎಂದ ಸಿಎಂ
ತಮಿಳುನಾಡಿಗೆ ನೀರು ಬಿಡಲು ಆದೇಶದ ವಿರುದ್ಧ CWMAಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ title=
Kaveri River water dispute

ಬೆಂಗಳೂರು:  ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್-ಪ್ರಜ್ವಲ್ ರೇವಣ್ಣ ಭೇಟಿ! ಮುಖಾಮುಖಿ ವೇಳೆ ಆಗಿದ್ದೇನು?

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು CWRC ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ CWRC ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.

ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಯಿತು ಎಂದರು.

ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದರು.

ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯನ್ನು ತೀರ್ಮಾನಿಸಲಾಗುವುದು ಎಂದರು.

ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಸ್ನೇಹಿತೆಯ ಪತಿಗೆ ಅಣ್ಣ ಎಂದು ರಾಖಿ ಕಟ್ಟಿದ್ಳು… ಆದ್ರೆ ಆತನಿಂದಲೇ ಮದುವೆಗೂ ಮುನ್ನ ಗರ್ಭಿಣಿಯಾದ್ಳು ಈ ಪ್ರಸಿದ್ಧ ನಟಿ!

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎoಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅoತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News