ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯಕರ್ತರ ಹತ್ಯೆ; ಇದು ಕಾಣದ ಕೈಗಳ ಷಡ್ಯಂತ್ರವೆಂದ ಬಿಜೆಪಿ

ಕಾಯಕರ್ತರ ರಕ್ಷಣೆ ಬಿಜೆಪಿ ಗುರಿಯಾಗಿದ್ದು, ಮುಂದೆಂದೂ ಈ ಪರಿಸ್ಥಿತಿ ಮರುಕಳಿಸದಂತೆ ನೋಡಿಕೊಳ್ಳಲಿದೆ ಎಂದು ಬಿಜೆಪಿ ಹೇಳಿದೆ.

Written by - Puttaraj K Alur | Last Updated : Jul 28, 2022, 03:52 PM IST
  • ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯಕರ್ತರ ಹತ್ಯೆ ಮಾಡುವ ಮೂಲಕ ಕಾಣದ ಕೈಗಳು ಷಡ್ಯಂತ್ರ ನಡೆಸಿವೆ
  • ಮತಾಂಧ ಶಕ್ತಿಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹದಗಡೆಸಲು ವಿಫಲ ಪಯತ್ನ ನಡೆಸುತ್ತಲೇ ಇವೆ
  • ಕಾಯಕರ್ತರ ರಕ್ಷಣೆ ಬಿಜೆಪಿ ಗುರಿಯಾಗಿದ್ದು, ಮುಂದೆಂದೂ ಈ ಪರಿಸ್ಥಿತಿ ಮರುಕಳಿಸದಂತೆ ನೋಡಿಕೊಳ್ಳಲಿದೆ
ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯಕರ್ತರ ಹತ್ಯೆ; ಇದು ಕಾಣದ ಕೈಗಳ ಷಡ್ಯಂತ್ರವೆಂದ ಬಿಜೆಪಿ title=
ಸಮಾಜಘಾತುಕ ಶಕ್ತಿಗಳ ವಿರುದ್ಧ ಬಿಜೆಪಿ ಸಮರ

ಬೆಂಗಳೂರು: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯಕರ್ತರನ್ನ ಹತ್ಯೆ ಮಾಡುವ ಮೂಲಕ ಕಾಣದ ಕೈಗಳು ಷಡ್ಯಂತ್ರ ನಡೆಸಿವೆ ಎಂದು ಬಿಜೆಪಿ ಅರೋಪಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಗುರುವಾರ ಸರಣಿ ಟ್ವೀಟ್ ಮಾಡಿದೆ.

‘ಮತಾಂಧ ಶಕ್ತಿಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹದಗಡೆಸಲು ವಿಫಲ ಪಯತ್ನ ನಡೆಸುತ್ತಲೇ ಇವೆ. ಬಿಜೆಪಿ ಸರ್ಕಾರ ಪ್ರತಿ ಪ್ರಕರಣದಲ್ಲೂ  ದುಷ್ಕರ್ಮಿಗಳ ಹೆಡೆಮುರಿ ಕಟ್ಟುತ್ತಾ ಬಂದಿದೆ. ಪ್ರವೀಣ್ ನೆಟ್ಟಾರು ಹತ್ಯೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿಯವರು ಈ ಹಿಂದಿನ ಎಲ್ಲಾ ಪ್ರಕರಣಗಳಿಗಿಂತಲೂ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಸಮಾಜಘಾತುಕ ಶಕ್ತಿಗಳ ವಿರುದ್ಧ ಬಿಜೆಪಿ ಸಮರ ಸಾರಿದೆ’ ಎಂದು ಹೇಳಿದೆ.

ಇದನ್ನೂ ಓದಿ: DK Shivakumar : 'ಒಬ್ಬ ಹೋಮ್‌ ಮಿನಿಸ್ಟರ್, ಪಕ್ಷ ಅಂತ ತೊಗೊಂಡರೇ ರಾಜ್ಯ ಉಳಿಯಲು ಸಾಧ್ಯವಿಲ್ಲ'

‘ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಯಲ್ಲಿ ತೊಡಗಿದ್ದ 426 ದುಷ್ಕರ್ಮಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಲಾಗಿತ್ತು. ಸರ್ಕಾರ ಯಾವುದೇ ತಾರತಮ್ಯ ತೋರದೆ ನಿರ್ದಾಕ್ಷಣ್ಯ ಕ್ರಮಕೈಗೊಂಡು ಕೃತ್ಯದಲ್ಲಿ ಭಾಗಿಯಾದವರನ್ನು ಜೈಲಿಗೆ ಅಟ್ಟುವಲ್ಲಿ ಯಶಸ್ವಿಯಾಗಿತ್ತು. ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಬಿಜೆಪಿ ಸರ್ಕಾರ ಸದಾ ಬದ್ಧ’ವೆಂದು ಟ್ವೀಟ್ ಮಾಡಿದೆ.

‘ಹುಬ್ಬಳ್ಳಿಯಲ್ಲಿ ಮತಾಂಧತೆಯ ವಿಷ ಬೀಜ ಬಿತ್ತಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನಿಸಲಾಗಿತ್ತು. ಆ ಗಲಭೆಗೆ ಕಾರಣನಾಗಿದ್ದ ಮಾಸ್ಟರ್ ಮೈಂಡ್ ಮೌಲ್ವಿ ವಾಸೀಂ ಪಠಾಣ್‌ನನ್ನು ಬಿಜೆಪಿ ಸರ್ಕಾರ ಕ್ಷಿಪ್ರಗತಿಯಲ್ಲಿ ಬಂಧಿಸುವ ಮೂಲಕ ಶಾಂತಿಗೆ ನಾಂದಿ ಹಾಡಿತ್ತು. ಶಿವಮೊಗ್ಗದಲ್ಲಿ ಹರ್ಷರನ್ನು ಮತಾಂಧ ದುಷ್ಟರು ಹತ್ಯೆ ಮಾಡಿದ್ದರು. ಘಟನೆ ನಡೆದ ನಾಲ್ಕೇ ತಾಸುಗಳಲ್ಲಿ 6 ಮಂದಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟುವಲ್ಲಿ ಬಿಜೆಪಿ ಸರ್ಕಾರ ದಿಟ್ಟತನ ತೋರಿತ್ತು. ಅದೇ ರೀತಿ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ 20 ಜನರನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: Siddaramaiah : ಸಿದ್ದರಾಮಯ್ಯ 'ಅಮೃತ ಮಹೋತ್ಸವ' : 50 ಎಕರೆ ಜಾಗದಲ್ಲಿ ಬೃಹತ್ ವೇದಿಕೆ!

‘ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯಕರ್ತರನ್ನ ಹತ್ಯೆ ಮಾಡುವ ಮೂಲಕ ಕಾಣದ ಕೈಗಳು ಷಡ್ಯಂತ್ರ ನಡೆಸಿವೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಘಟನೆಯ ಹಿಂದಿರುವ ದುಷ್ಕರ್ಮಿಗಳನ್ನು ಹೊರಗಳೆದು, ಸಮಾಜದ ಮುಂದೆ ಬಯಲು ಮಾಡಲಿದ್ದಾರೆ. ಕಾಯಕರ್ತರ ರಕ್ಷಣೆ ಬಿಜೆಪಿ ಗುರಿಯಾಗಿದ್ದು, ಮುಂದೆಂದೂ ಈ ಪರಿಸ್ಥಿತಿ ಮರುಕಳಿಸದಂತೆ ನೋಡಿಕೊಳ್ಳಲಿದೆ’ ಎಂದು ಬಿಜೆಪಿ ಹೇಳಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News