ಐರನ್ ಟ್ಯಾಬ್ಲೆಟ್ ಸೇವಿಸಿ ಸರ್ಕಾರಿ ಶಾಲೆಯ 55 ವಿದ್ಯಾರ್ಥಿಗಳು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದ ಸರ್ಕಾರಿ ಶಾಲೆಯ 239 ಮಕ್ಕಳಿಗೆ ಫಾಲಿಕ್ ಆಸಿಡ್ ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಕೆಲ ಹೊತ್ತಿನಲ್ಲೇ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವಿನ ಬಗ್ಗೆ ದೂರು ನೀಡಿದ್ದು ಅಸ್ವಸ್ಥಗೊಂಡಿದ್ದರು. 

Written by - Yashaswini V | Last Updated : Jul 26, 2022, 06:27 AM IST
  • ಕಬ್ಬಿಣ ಅಂಶ ಮಾತ್ರೆ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ತ
  • ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಲ್ಲಿ ಘಟನೆ
  • ಬಸಿಡೋಣಿ ಸರ್ಕಾರಿ ಶಾಲೆಯ 239 ಮಕ್ಕಳಿಗೆ ಫಾಲಿಕ್ ಆಸಿಡ್ ಮಾತ್ರೆ ನೀಡಲಾಗಿತ್ತು
ಐರನ್ ಟ್ಯಾಬ್ಲೆಟ್ ಸೇವಿಸಿ ಸರ್ಕಾರಿ ಶಾಲೆಯ 55 ವಿದ್ಯಾರ್ಥಿಗಳು ಅಸ್ವಸ್ಥ title=
Govt school students ill

ಬೆಳಗಾವಿ: ಅನಿಮಿಯ ಮುಕ್ತ ಭಾರತ್ ಯೋಜನೆಯಡಿ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಕಬ್ಬಿಣದ ಅಂಶದ ಮಾತ್ರೆ ಅಂದರೆ ಐರನ್ ಟ್ಯಾಬ್ಲೆಟ್ ಸೇವಿಸಿ ಸುಮಾರು 55 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದ ಸರ್ಕಾರಿ ಶಾಲೆಯ 239 ಮಕ್ಕಳಿಗೆ ಫಾಲಿಕ್ ಆಸಿಡ್ ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಕೆಲ ಹೊತ್ತಿನಲ್ಲೇ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವಿನ ಬಗ್ಗೆ ದೂರು ನೀಡಿದ್ದು ಅಸ್ವಸ್ಥಗೊಂಡಿದ್ದರು. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಸವದತ್ತಿ ತಾಲೂಕು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ- KSRTC ಆಸ್ಪತ್ರೆ ಖಾಸಗೀಯವರಿಗೆ ಮಾರಾಟ! ಎಂ.ಪಿ ತೇಜಸ್ವಿ ಸೂರ್ಯ ಮೇಲೆ ನೌಕರರ ಕೆಂಗಣ್ಣು

ಇನ್ನು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದಕ್ಕೆ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶಾಲೆಯಲ್ಲಿ ನೀಡಿದ ಮಾತ್ರೆ ಸೇವಿಸಿ ಮಕ್ಕಳು ಅಸ್ವಸ್ಥಗೊಂಡಿದಕ್ಕೆ ಪಾಲಕರು ಸಹ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ- CET Result 2022: ಜುಲೈ 30ರಂದು ಸಿಇಟಿ ಫಲಿತಾಂಶ

ಈ ಕುರಿತಂತೆ ಪ್ರತಿಕ್ರಿಯಿಸಿರುವ ಸವದತ್ತಿ ತಾಲೂಕು ವೈದ್ಯಾಧಿಕಾರಿ  ಡಾ. ಮಹೇಶ ಚಿತ್ತರಗಿ, ಮಕ್ಕಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ಆತಂಕ ಪಡುವ ಅಗತ್ಯ ಇಲ್ಲ.  ಆರೋಗ್ಯದಲ್ಲಿ ಚೇತರಿಕೆ ಕಂಡಿರುವ ಕೆಲವು ವಿದ್ಯಾರ್ಥಿಗಳನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ. ಇನ್ನುಳಿದ ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು 
ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News