ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್

 ಗ್ರಾಮ ಪಂಚಾಯತ್ ಕಾರ್ಯಾಲಯದ ಕಂಪ್ಯೂಟರ್ ಆಪರೇಟರ್ ವಿಠ್ಠಲ್ ತಂದೆ ವೀರಣ್ಣಶೆಟ್ಟಿ ಅವರು ಲಂಚದ ಹಣ 15,000 ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Written by - Zee Kannada News Desk | Last Updated : Apr 28, 2023, 04:33 PM IST
  • ಕಂಪ್ಯೂಟರ್ ಆಪರೇಟರ್ ವಿಠ್ಠಲ್ ತಂದೆ ವೀರಣ್ಣಶೆಟ್ಟಿ ಅವರು ಲಂಚದ ಹಣ 15,000 ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ
  • ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಪ್ರಕರಣವನ್ನು ಭೇದಿಸಿರುತ್ತಾರೆ
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ title=
ಸಾಂದರ್ಭಿಕ ಚಿತ್ರ

ಕೊಪ್ಪಳ: ಗ್ರಾಮ ಪಂಚಾಯತ್ ಕಾರ್ಯಾಲಯದ ಕಂಪ್ಯೂಟರ್ ಆಪರೇಟರ್ ವಿಠ್ಠಲ್ ತಂದೆ ವೀರಣ್ಣಶೆಟ್ಟಿ ಅವರು ಲಂಚದ ಹಣ 15,000 ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇದನ್ನೂ ಓದಿ: ದಲಿತರು, ಹಿಂದುಳಿದವರು ಭಿಕ್ಷುಕರೇ?: ಡಿಕೆಶಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಮನೆ ಸ್ವತ್ತಿಗೆ ನಮೂನೆ 9 ನೀಡಲು ಕುಕನೂರು ತಾಲೂಕಿನ ನೆಲಜೇರಿ ಗ್ರಾಪಂ ಪಿಡಿಓ ಆನಂದ ಎಲಿಗಾರ ಅವರ ಸೂಚನೆಯಂತೆ ಕಂಪ್ಯೂಟರ್ ಆಪರೇಟರ್ ವಿಠ್ಠಲ್ ತಂದೆ ವೀರಣ್ಣಶೆಟ್ಟಿ ಅವರು 20 ಸಾವಿರ ರೂ.ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಚೌಕಾಸಿ ನಂತರ 15 ಸಾವಿರ ಲಂಚದ ಹಣಕ್ಕೆ ಒಪ್ಪಿಕೊಂಡು ಕುದರಿಮೋತಿ ಗ್ರಾಪಂ ಕಾರ್ಯಾಲಯದಲ್ಲಿ ದೂರುದಾರರಿಂದ ಲಂಚದ ಹಣ ಪಡೆದುಕೊಂಡು ಟ್ರಾಪ್‌ಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ಮೇ.10 ರಂದು ಮತದಾನ ಮಾಡಲು ಕಾರ್ಮಿಕರಿಗೆ ವೇತನ ಸಹಿತ ರಜೆ

ರಾಯಚೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಯು ಪ್ರಕರಣವನ್ನು ಭೇದಿಸಿರುತ್ತಾರೆ.

ಈ ಬಗ್ಗೆ ಕೊಪ್ಪಳ ಲೋಕಾಯುಕ್ತ ಠಾಣೆಯಲ್ಲಿ ಗುನ್ನೆ ನಂ. 04/2023 ರಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ ಎಂದು ಕರ್ನಾಟಕ ಲೋಕಾಯುಕ್ತ ರಾಯಚೂರು ಪೊಲೀಸ್ ಅಧೀಕ್ಷಕರ ಕಚೇರಿಯ ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3Lw

 

Trending News