/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪಂಚಾಯ್ತಿ ಚುಕ್ಕಾಣಿ ಹಿಡಿಯಲು ಪೈಪೋಟಿ ಶುರುವಾಗಿದೆ. ಅಧ್ಯಕ್ಷ-ಉಪಾಧ್ಯಕ್ಷ ಗಾದಿಗಾಗಿ ಕಸರತ್ತು ಆರಂಭವಾಗಿದೆ. 5728  ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ ಕಮಲ ಪಕ್ಷ ಹೆಚ್ಚು ಕಮಾಲ್ ಮಾಡಿ ಗ್ರಾಮೀಣ ಪ್ರದೇಶಗಳಲ್ಲಿ ಮೇಲುಗೈ ಸಾಧಿಸಿದ್ದು, ಹೆಚ್ಚಿನ  ಗ್ರಾಮ ಪಂಚಾಯಿತಿಗಳಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ತಂತ್ರ ರೂಪಿಸಲು ಶುರು ಮಾಡಿದೆ.

ಗೆದ್ದ ಅಭ್ಯರ್ಥಿಗಳು ಸಂಭ್ರಮದ ಲ್ಲಿದ್ದು, ಅಧ್ಯಕ್ಷ-ಉಪಾಧ್ಯಕ್ಷ ಗಾದಿಹಿಡಿಯುವ ಮಹತ್ವಾಕಾಂಕ್ಷೆಯಲ್ಲಿರುವವರು ಸರ್ಕಾರ ಪ್ರಕಟಿಸುವ ಮೀಸಲಾತಿಯನ್ನು ಎದುರು ನೋಡುತ್ತಿದ್ದಾರೆ. ಸ್ಥಳೀಯ ಶಾಸಕರು ಹೆಚ್ಚಿನ ಪಂಚಾಯಿತಿ(Grama Panchayat)ಗಳನ್ನು ತಮ್ಮ ಕೈ ವಶ ಮಾಡಿಕೊಳ್ಳಲು ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಅಗತ್ಯ ಮೀಸಲಾತಿ ರೂಪಿಸುವ ಯೋಜನೆಯಲ್ಲಿ ತೊಡಗಿದ್ದಾರೆ.

B.S.Yediyurappa: ರೈತರ ಪರ ರಾಜ್ಯ ಸರ್ಕಾರ: 3,800 ಗ್ರಾ. ಪಂ. ಬಿಜೆಪಿ ತೆಕ್ಕೆಗೆ..!

ರಾಜಕೀಯ ಪಕ್ಷ ರಹಿತವಾಗಿ  ಗ್ರಾಮ ಪಂಚಾಯಿತಿ ಚುನಾವಣೆ ನಡೆದರೂ ಪರೋಕ್ಷವಾಗಿ ರಾಜಕೀಯ ಪಕ್ಷಗಳ ದರ್ಬಾರೇ ಹೆಚ್ಚಾಗಿತ್ತು. ಈಗ ಪಂಚಾಯಿತಿಗಳ ಅಧಿಕಾರದ ಚುಕ್ಕಾಣಿ ಹಿಡಿಯಲು ತಮಗೆ ಬೇಕಾದವರನ್ನು ಪಂಚಾಯಿತಿಗಳ ಗದ್ದುಗೆಯಲ್ಲಿ ಕೂರಿಸಲು ರಾಜಕೀಯ ಪಕ್ಷಗಳು ತಂತ್ರ ಹೆಣೆಯುತ್ತಿವೆ. ಮೊದಲ ಸ್ಥಾನದಲ್ಲಿರುವ ಬಿಜೆಪಿ ಪಕ್ಷೇತರ ಅಭ್ಯರ್ಥಿಗಳನ್ನು ಸೆಳೆದು ಹೆಚ್ಚು ಪಂಚಾಯ್ತಿಗಳನ್ನು ತನ್ನದಾಗಿಸಿಕೊಳ್ಳುವ ಪ್ರಯತ್ನಕ್ಕೆ ಈಗಾಗಲೇ ಕೈ ಹಾಕಿದೆ. ಹಲವು ಪಂಚಾಯ್ತಿಗಳಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿಯುವ ಮಾತುಕತೆಗಳು ಪ್ರಾರಂಭವಾಗಿವೆ.

School-College Open: ನಾಳೆಯಿಂದ ಶಾಲಾ-ಕಾಲೇಜು ಆರಂಭ: ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ!

ಮುಂಬರುವ ತಾಪಂ, ಜಿಪಂ, ವಿಧಾನಸಭೆ ಚುನಾವಣೆಗಳಿಗೆ ಪಂಚಾಯಿತಿ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಪಂಚಾಯಿತಿಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತಂತ್ರ-ಪ್ರತಿ ತಂತ್ರಗಳನ್ನು ರೂಪಿಸುತ್ತಿವೆ. ತಮ್ಮ ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಸ್ಥಾನದಲ್ಲಿ ಗೆದ್ದರೂ ಮೀಸಲಾತಿಯಲ್ಲಿ , ಅಧಿಕಾರ ಹಿಡಿಯುವಲ್ಲಿ ವಂಚಿತರಾಗುವ ಸಾಧ್ಯತೆಗಳು ಇವೆ. ಹಾಗಾಗಿ ಪ್ರತಿಪಕ್ಷಗಳು ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿವೆ.

ವಿವಾದಾಸ್ಪದ ಪೊಲೀಸ್ ಅಧಿಕಾರಿ ಡಿ. ರೂಪ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಕೇಳಿರುವುದೇನು?

ಈಗಾಗಲೇ ಪ್ರತಿಪಕ್ಷ ಕಾಂಗ್ರೆಸ್ ತಮ್ಮ ಬೆಂಬಲಿತ ಸದಸ್ಯರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಹಲವು ಪಂಚಾಯಿತಿಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ನಿರ್ಣಾಯಕವಾಗಲಿದ್ದಾರೆ. ಯಾವ ಪಂಚಾಯಿತಿ ಯಾವ ಪಕ್ಷದ ಪಾಲಾಗಲಿವೆ. ಯಾರು ಗದ್ದುಗೆ ಏರಲಿದ್ದಾರೆ ಎಂಬುದು ಮೀಸಲಾತಿ ಪ್ರಕಟವಾದ ನಂತರ ಗೊತ್ತಾಗಲಿದೆ.

Gram Panchayat Election: ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್‌ ಸಾಧನೆ ಗಮನಾರ್ಹ- ಕುಮಾರಸ್ವಾಮಿ

ಸ್ಥಳೀಯ ಶಾಸಕರು, ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ ಪ್ರತಿನಿಧಿಗಳು ಪಂಚಾಯಿತಿ  ಚುಕ್ಕಾಣಿ ಹಿಡಿಯುವಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದು, ತಮ್ಮ ಬೆಂಬಲಿತ ಅಭ್ಯರ್ಥಿಗಳಿಗೆ ಮೀಸಲಾತಿ ಸಿಗುವಂತೆ ಮಾಡುವ ಪ್ರಯತ್ನದಲ್ಲಿ ತೊಡಗಿದ್ದಾರೆ.

New Year : ಬೆಂಗಳೂರಿನಲ್ಲಿ ಮಧ್ಯಾಹ್ನ 12 ಗಂಟೆಯಿಂದಲೇ ನಿಷೇಧಾಜ್ಞೆ; ಇಂದು ಏನಿರುತ್ತೆ, ಏನಿರಲ್ಲ ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್..

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ

Android Link - https://bit.ly/3hDyh4G

iOS Link - https://apple.co/3loQYe

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
grama panchayat election result
News Source: 
Home Title: 

ಗ್ರಾ. ಪಂ. ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ಶುರುವಾಯ್ತು 'ಬಿಗ್ ಫೈಟ್'

Grama Panchayat: ಗ್ರಾ. ಪಂ. ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ಶುರುವಾಯ್ತು 'ಬಿಗ್ ಫೈಟ್'
Yes
Is Blog?: 
No
Tags: 
Facebook Instant Article: 
Yes
Highlights: 

ಅಧ್ಯಕ್ಷ-ಉಪಾಧ್ಯಕ್ಷ ಗಾದಿಗಾಗಿ ಕಸರತ್ತು ಆರಂಭವಾಗಿದೆ. 5728  ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ ಕಮಲ ಪಕ್ಷ ಹೆಚ್ಚು ಕಮಾಲ್ ಮಾಡಿ ಗ್ರಾಮೀಣ ಪ್ರದೇಶಗಳಲ್ಲಿ ಮೇಲುಗೈ

ಹೆಚ್ಚಿನ  ಗ್ರಾಮ ಪಂಚಾಯಿತಿಗಳಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ತಂತ್ರ ರೂಪಿಸಲು ಶುರು

ಮುಂಬರುವ ತಾಪಂ, ಜಿಪಂ, ವಿಧಾನಸಭೆ ಚುನಾವಣೆಗಳಿಗೆ ಪಂಚಾಯಿತಿ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಪಂಚಾಯಿತಿಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತಂತ್ರ-ಪ್ರತಿ ತಂತ್ರಗಳನ್ನು ರೂಪಿಸುತ್ತಿವೆ

Mobile Title: 
ಗ್ರಾ. ಪಂ. ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ಶುರುವಾಯ್ತು 'ಬಿಗ್ ಫೈಟ್'
Publish Later: 
No
Publish At: 
Thursday, December 31, 2020 - 15:40
Created By: 
Chennabasava A Kashinakunti
Updated By: 
Chennabasava A Kashinakunti
Published By: 
Chennabasava A Kashinakunti
Request Count: 
12