Griha Jyoti Yojana: ಇಂದಿನಿಂದ ಗೃಹ ಜ್ಯೋತಿ ಯೋಜನೆ ನೋಂದಣಿ ಆರಂಭ; ಇಲ್ಲಿದೆ ಅರ್ಜಿ ಸಲ್ಲಿಸುವ ಮಾಹಿತಿ

Griha Jyoti Yojana Registration: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದಿನಿಂದ ಮುಕ್ತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ಪೂರೈಸಲು ಸರ್ಕಾರ ಸರ್ವಸಿದ್ಧವಾಗಿದೆ.

Written by - Zee Kannada News Desk | Last Updated : Jun 18, 2023, 01:23 PM IST
  • ಇಂದಿನಿಂದ ಗೃಹ ಜ್ಯೋತಿ ಯೋಜನೆ ನೋಂದಣಿ ಆರಂಭ
  • ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ
Griha Jyoti Yojana: ಇಂದಿನಿಂದ ಗೃಹ ಜ್ಯೋತಿ ಯೋಜನೆ ನೋಂದಣಿ ಆರಂಭ; ಇಲ್ಲಿದೆ ಅರ್ಜಿ ಸಲ್ಲಿಸುವ ಮಾಹಿತಿ title=

ಬೆಂಗಳೂರು: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದಿನಿಂದ ಮುಕ್ತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ಪೂರೈಸಲು ಸರ್ಕಾರ ಸರ್ವಸಿದ್ಧವಾಗಿದೆ.

ಈ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿರುತ್ತಾರೆ.

ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ: 

  • ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಸಬೇಕು
  • ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್​ ಕಚೇರಿಗಳಲ್ಲಿ ನೋಂದಾಯಿಸಬಹುದು
  • ಆಧಾರ್ ಕಾರ್ಡ್, ಆರ್​ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
  • ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿಗಾಗಿ ವೆಬ್​ಸೈಟ್​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು: https://sevasindhuservices.karnataka.gov.in/loginSubmitForm.do

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News