ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ, ಶಾಸಕ ಗವಿಯಪ್ಪ ಅವರಿಗೆ ಶೋಕಾಸ್ ನೋಟೀಸ್ ನೀಡುತ್ತೇವೆ: ಡಿಸಿಎಂ ಡಿ.ಕೆ ಶಿವಕುಮಾರ್

ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. 

Written by - Prashobh Devanahalli | Last Updated : Nov 26, 2024, 04:18 PM IST
  • ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ
  • ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟೀಸ್
  • ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ
ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ, ಶಾಸಕ ಗವಿಯಪ್ಪ ಅವರಿಗೆ ಶೋಕಾಸ್ ನೋಟೀಸ್ ನೀಡುತ್ತೇವೆ: ಡಿಸಿಎಂ ಡಿ.ಕೆ ಶಿವಕುಮಾರ್ title=

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. 

ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ ಎಂಬ ಶಾಸಕ ಗವಿಯಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈ ರೀತಿ ಹೇಳಿದ್ದಾರೆ ಎಂದು ನಾನು ನಂಬುವುದಿಲ್ಲ. ಒಂದು ವೇಳೆ ಅವರು ಈ ಹೇಳಿಕೆ ಕೊಟ್ಟಿದ್ದೇ ಆಗಿದ್ದರೆ ವಿವರಣೆ ಕೇಳಿ ನೋಟೀಸ್ ನೀಡುತ್ತೇವೆ. ನಾವು ಗ್ಯಾರಂಟಿ ವಿಚಾರದಲ್ಲಿ ರಾಜ್ಯದ ಜನರಿಗೆ ಮಾತು ಕೊಟ್ಟಿದ್ದು, ಎಂತಹದೆ ಪರಿಸ್ಥಿತಿ ಬಂದರೂ ನಾವು ಅದಕ್ಕೆ ಬದ್ಧವಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು. ಪ್ರಶ್ನೆ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು. ಅನರ್ಹರು ಇದರ ಲಾಭ ಪಡೆಯುತ್ತಿದ್ದರೆ, ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈ ಯೋಜನೆಗಳಿಂದ ಪ್ರತಿ ಕ್ಷೇತ್ರಕ್ಕೆ 250 ಕೋಟಿಯಷ್ಟು ಹಣ ಹೋಗುತ್ತಿದೆ. ಇದು ಆ ಕ್ಷೇತ್ರದ ಜನರ ಅಭಿವೃದ್ಧಿಯಲ್ಲವೇ? ಅಭಿವೃದ್ಧಿ ಕಾರ್ಯಗಳಿಗೂ ನಾವು ಅನುದಾನ ನೀಡುತ್ತಿದ್ದೇವೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಭೇಟಿ ನೀಡುತ್ತಿರುವುದು ಮಹದಾಯಿ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಹಾಗೂ ಆ ಭಾಗದ ಸಂಸದರನ್ನು ಭೇಟಿಯಾಗಲು. ಜೊತೆಗೆ ಜಾರ್ಖಂಡ್ ನಲ್ಲಿ ಹೇಮಂತ್ ಸೊರೇನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುವುದು. ಇನ್ನು ಗಾಂಧೀಜಿ ಅವರು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ  ಅಧ್ಯಕ್ಷರಾಗಿ  ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮದ ರೂಪುರೇಷೆ ವಿಚಾರವಾಗಿ ಚರ್ಚೆ ಮಾಡಲು ತೆರಳುತ್ತಿದ್ದೇನೆ” ಎಂದು ತಿಳಿಸಿದರು.

ಇದನ್ನೂ ಓದಿ: ಭಾರತದಲ್ಲಿ ನಕಲಿ ₹500 ನೋಟುಗಳ ಪ್ರಮಾಣದಲ್ಲಿ 317% ಏರಿಕೆ: ಹಣಕಾಸು ಸಚಿವಾಲಯ

ಆದಷ್ಟು ಬೇಗ ಮಹದಾಯಿ ಯೋಜನೆಗೆ ಅನುಮತಿ ನೀಡುತ್ತೇವೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಮಹದಾಯಿ ಯೋಜನೆಗೂ ಅನುಮತಿ ಕೊಡಿಸಲಿ, ಮಾನ್ಯ ದೇವೇಗೌಡರು ಮೇಕೆದಾಟು ಯೋಜನೆಗೂ ಅನುಮತಿ ಕೊಡಿಸುವುದಾಗಿ ಹೇಳಿದ್ದು, ಅದನ್ನೂ ಕೊಡಿಸಲಿ. ನಮ್ಮ ರಾಜ್ಯಕ್ಕೆ ಒಳ್ಳೆಯದಾಗಲು ಸಹಕಾರ ಕೊಟ್ಟರೆ ನಾವು ಅದನ್ನು ಬಳಸಿಕೊಳ್ಳಲು ಸಿದ್ಧ” ಎಂದು ತಿಳಿಸಿದರು.

ಹೈಕಮಾಂಡ್ ನಾಯಕರ ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಖಂಡಿತಾ, ಕಾಂಗ್ರೆಸ್ ಕಚೇರಿ ನಮ್ಮ ಪಾಲಿನ ದೇವಾಲಯ. ಅಲ್ಲಿಗೆ ಹೋದ ಮೇಲೆ ನಾಯಕರನ್ನು ಭೇಟಿ ಮಾಡುತ್ತೇವೆ” ಎಂದು ತಿಳಿಸಿದರು.

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರ ಗೊತ್ತಿಲ್ಲ. ಗೊತ್ತಾದಾಗ ಮಾತನಾಡುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ಕೇಳಿ” ಎಂದು ತಿಳಿಸಿದರು. ಸಚಿವರಿಗೂ ತಮ್ಮ ಸ್ಥಾನ ಬಿಡಲು ಹೇಳಿರುವುದಾಗಿ ಭಾಷಣದಲ್ಲಿ ಪ್ರಸ್ತಾಪ ಮಾಡಿದಿರಿ ಎಂದು ಕೇಳಿದಾಗ “ಅದು ತಕ್ಷಣಕ್ಕೆ ಅಲ್ಲ. ಅದಕ್ಕೆ ಇನ್ನು ಸಮಯಾವಕಾಶವಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಉಪ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರಕ್ಕೆ ಜನಾದೇಶವಲ್ಲ : ಬಸವರಾಜ ಬೊಮ್ಮಾಯಿ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News