ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುತ್ತವೆ: ಸಿಎಂ ಸಿದ್ದರಾಮಯ್ಯ

ಬಜೆಟ್‌ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಇದೇ ವೇಳೆ ಸ್ಪಷ್ಟಪಡಿಸಿದರು. 

Written by - Puttaraj K Alur | Last Updated : Jul 10, 2024, 07:40 PM IST
  • ಬಜೆಟ್‌ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ
  • ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ
  • ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುತ್ತವೆ: ಸಿಎಂ ಸಿದ್ದರಾಮಯ್ಯ title=
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾವು ನುಡಿದಂತೆ ನಡೆಯದಿದ್ದರೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷ 80 ಸಾವಿರ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಬಿಜೆಪಿಯವರು ದೇಶದ ಮತದಾರರನ್ನು ದಡ್ಡರು ಎಂದು ಬಿಂಬಿಸುತ್ತಿದ್ದಾರೆ. ಆದರೆ ನಮ್ಮ ಮತದಾರರು ದಡ್ಡರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಅವರು, ʼನನ್ನ ಮತ್ತು ಚಾಮರಾಜನಗರದ ಜನರ ಸಂಬಂಧ 40 ವರ್ಷಗಳಷ್ಟು ಹಳೆಯದು ಮತ್ತು ಗಟ್ಟಿಯದ್ದು. ಇಲ್ಲಿನ ಜನರ ಪ್ರೀತಿ - ಅಭಿಮಾನಕ್ಕೆ ನಾನು ಚಿರ‌ಋಣಿʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಾಳಿ‌ ಮಾಡುವುದು ಇಡಿ ಅವರ ಕೆಲಸ ಮಾಡಿದ್ದಾರೆ

ʼರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರ ಸರ್ಕಾರ ನಮ್ಮ ರಾಜ್ಯದ ಪಾಲಿನ ಹಣ ಕೊಡಲಿಲ್ಲ. ನಾವು ಕಾನೂನು ಹೋರಾಟ ಶುರು ಮಾಡಿದೆವು. ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ಬಳಿಕ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಸ್ವಲ್ಪ ಹಣ ಬಿಡುಗಡೆ ಮಾಡಿತು. ಹೀಗಾಗಿ ಕೇಂದ್ರದಲ್ಲಿ ರಾಜ್ಯದ ಪರವಾಗಿ ಹೋರಾಟ ಮುಂದುವರೆಸಲು ಎಲ್ಲಾ 28 ಮಂದಿ ಸಂಸದರಿಗೆ ಸೂಚನೆ ನೀಡಿದ್ದೇವೆʼ ಎಂದು ಸಿದ್ದರಾಮಯ್ಯ ತಿಳಿಸಿದರು. ʼನೆಹರೂ ಅವಧಿಯಿಂದ ಇವತ್ತಿನವರೆಗೆ ಕಾಂಗ್ರೆಸ್ ನಿರಂತರವಾಗಿ ಸಮಾಜದ ಸಮಗ್ರ ಅಭಿವೃದ್ಧಿಗೆ, ಸರ್ವ ಜನರ ಪ್ರಗತಿ ಮತ್ತು ಸಾಮರಸ್ಯಕ್ಕಾಗಿ ಶ್ರಮಿಸುತ್ತಿದೆ, ಕಾರ್ಯಕ್ರಮಗಳನ್ನು ರೂಪಿಸುತ್ತಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಅಡಿಯಲ್ಲಿ ದಲಿತರು, ಮಹಿಳೆಯರು, ಹಿಂದುಳಿದವರು, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ಕೊಡಬೇಕು ಎನ್ನುವುದು ನನ್ನ ಗುರಿಯಾಗಿದೆ. ಇದೇ ಕಾಂಗ್ರೆಸ್ ಪಕ್ಷದ ಆಧ್ಯತೆಯೂ ಆಗಿದೆʼ ಎಂದು ಹೇಳಿದರು.

ಇದನ್ನೂ ಓದಿ: ಅಕ್ರಮವಾಗಿ ವಿದೇಶಿ ಚಾಕಲೇಟ್ ಮಾರಾಟ ಮಾಡುತ್ತಿದ್ದವರ ಬಂಧನ

ಈ ದೇಶದ ಸ್ವಾತಂತ್ರ್ಯಕ್ಕಾಗಿ ಅತಿಹೆಚ್ಚು ಪ್ರಾಣ, ಆಸ್ತಿ, ಪಾಸ್ತಿ ಕಳೆದುಕೊಂಡವರು ನಾವು ಕಾಂಗ್ರೆಸ್ಸಿಗರು. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಮಹಾತ್ಮಗಾಂಧಿ ಕರೆ ಕೊಟ್ಟಾಗ ಜನಸಂಘ (BJP) ಬ್ರಿಟಿಷರ ಜೊತೆ ಕೈಜೋಡಿಸಿದರೆ ಉಳಿದ ಭಾರತೀಯರೆಲ್ಲರೂ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು. ಸರ್ವ ಜಾತಿ, ಜನಾಂಗಗಳ ಅನುಕೂಲಕ್ಕಾಗಿ ಕಾಂಗ್ರೆಸ್ ನಿರಂತರವಾಗಿ ಹಲವು ಭಾಗ್ಯಗಳನ್ನು ನೀಡುತ್ತಾ ಬಂದಿದೆ. ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ನಾಡಿನ ಜನತೆಯ ಮನೆ - ಮನೆಗೆ ತಲುಪಿಸಿದ್ದೇನೆ. ಆದರೂ ಬಿಜೆಪಿಯವರು ನಿರಂತರ ಸುಳ್ಳುಗಳನ್ನು ಹುಟ್ಟುಹಾಕುತ್ತಾ, ಗ್ಯಾರಂಟಿಗಳಿಗೆ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆʼ ಎಂದು ಕಿಡಿಕಾರಿದರು.

ಬಜೆಟ್‌ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಇದೇ ವೇಳೆ ಸ್ಪಷ್ಟಪಡಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News