ಬೆಂಗಳೂರು: ರಾಜ್ಯದಲ್ಲಿನ ಬರ ಪರಿಹಾರ ನಿರ್ವಹಣೆ, ರೈತರ ಸಾಲ ಮನ್ನಾ ಯೋಜನೆ ಹಾಗೂ ಜಿಂದಾಲ್ ಸಂಸ್ಥೆ ಭೂಮಿ ಮಾರಾಟ ಕುರಿತಾಗಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಈಗ ಸಿಎಂ ಕುಮಾರಸ್ವಾಮಿ ಈ ವಿಚಾರವಾಗಿ ತಾವು ಚರ್ಚಿಸಲು ಸಿದ್ಧ ಎಂದು ವಿರೋಧ ಪಕ್ಷದ ನಾಯಕ ಬಿಎಸ್ ಯಡಿಯೂರಪ್ಪನವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
@BSYBJP @BJP4Karnataka pic.twitter.com/E2nuYV3i79
— H D Kumaraswamy (@hd_kumaraswamy) June 16, 2019
ಮುಖ್ಯಮಂತ್ರಿ ಕುಮಾರಸ್ವಾಮಿ ಯಡಿಯೂರಪ್ಪನವರಿಗೆ ಬರೆದಿರುವ ಪತ್ರದಲ್ಲಿ " ತಮ್ಮ ನಾಯಕತ್ವದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ರಾಜ್ಯ ಸರ್ಕಾರವು ಬರ ಪರಿಹಾರ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ರಾಜ್ಯದ ಜನತೆಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಂಡಿರುತ್ತದೆ" ಎಂದು ಸಿಎಂ ತಿಳಿಸಿದ್ದಾರೆ.
ಇನ್ನು ರೈತರ ಸಾಲಮನ್ನಾ ಯೋಜನೆ ಅನುಷ್ಠಾನವನ್ನು ಸಹ ಯಶಸ್ವಿಗೊಳಿಸಲಾಗುತ್ತದೆ. ಜಿಂದಾಲ್ ಸಂಸ್ಥೆ ಭೂಮಿ ಮಾರಾಟ ಕುರಿತ ವಿಚಾರವಾಗಿ ಪುನರ್ ವಿಮರ್ಶೆಗೆ ಒಳಪಡಿಸುವ ನಿಟ್ಟಿನಲ್ಲಿ ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿ ಈ ವಿಚಾರವಾಗಿ ಸುದೀರ್ಘವಾಗಿ ಚರ್ಚಿಸಲಾಗುವುದು. ಅಲ್ಲದೆ ಈ ಎಲ್ಲ ವಿಚಾರಗಳ ಕುರಿತಾಗಿ ಪ್ರತಿಪಕ್ಷದೊಂದಿಗೆ ತಾವು ಚರ್ಚೆ ನಡೆಸಲು ಸಿದ್ದವಿರುವುದಾಗಿ ಸಿಎಂ ಕುಮಾರಸ್ವಾಮಿ ಲಿಖಿತ ಪತ್ರದ ಮೂಲಕ ಭರವಸೆ ನೀಡಿದ್ದಾರೆ.