Hamsa Moily: ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ..!

Hamsa Moily No More: ಹಂಸ ಮೊಯ್ಲಿಯವರು ಭರತನಾಟ್ಯ ನೃತ್ಯಗಾರ್ತಿ ಹಾಗೂ ಪ್ರಾಯೋಗಿ ನೃತ್ಯ ಸಂಯೋಜಿಕಿಯಾಗಿ ಖ್ಯಾತಿ ಪಡೆದಿದ್ದರು. ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ ಚಲನಚಿತ್ರ ʼಶೃಂಗಾರಂʼನಲ್ಲಿ ಸಹ ಅಭಿನಯಿಸಿ ಅವರು ಗಮನ ಸೆಳೆದಿದ್ದರು.   

Written by - Puttaraj K Alur | Last Updated : Jun 30, 2024, 10:48 PM IST
  • ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಗೆ ಪುತ್ರಿ ವಿಯೋಗ
  • ಅನಾರೋಗ್ಯದಿಂದ ಬಳಲುತ್ತಿದ್ದ ಹಂಸ ಮೊಯ್ಲಿ ನಿಧನ
  • ಭರತನಾಟ್ಯ ನೃತ್ಯಗಾರ್ತಿ, ನಟಿಯಾಗಿದ್ದ ಹಂಸ ಮೊಹ್ಲಿ ವಿಧಿವಶ
Hamsa Moily: ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ..! title=
ಹಂಸ ಮೊಹ್ಲಿ ವಿಧಿವಶ

Hamsa Moily No More: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಪುತ್ರಿ ಹಂಸ ಮೊಯ್ಲಿ (46) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪುತ್ರಿಯ ಸಾವಿನ ಸುದ್ದಿ ತಿಳಿದು ಛತ್ತೀಸ್‌ಘಡದಲ್ಲಿದ್ದ ವೀರಪ್ಪ ಮೊಯ್ಲಿಯವರು ರಾತ್ರಿಯೇ ವಾಪಾಸ್ ಆಗಿದ್ದಾರೆಂದು ವರದಿಯಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿಯವರ ಪುತ್ರಿ ಹಂಸ ಮೊಯ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ: ವಾಟ್ಸಾಪ್ ಮೂಲಕ ವಿಮಾನ ಟಿಕೆಟ್ ಬುಕಿಂಗ್: ಹೊಸ ವೈಶಿಷ್ಟ್ಯ ಪರಿಚಯಿಸಿದ ಇಂಡಿಗೋ

ಹಂಸ ಮೊಯ್ಲಿಯವರು ಭರತನಾಟ್ಯ ನೃತ್ಯಗಾರ್ತಿ ಹಾಗೂ ಪ್ರಾಯೋಗಿ ನೃತ್ಯ ಸಂಯೋಜಿಕಿಯಾಗಿ ಖ್ಯಾತಿ ಪಡೆದಿದ್ದರು. ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ ಚಲನಚಿತ್ರ ʼಶೃಂಗಾರಂʼನಲ್ಲಿ ಸಹ ಅಭಿನಯಿಸಿ ಅವರು ಗಮನ ಸೆಳೆದಿದ್ದರು.   

ನಾಳೆ ಬೆಳಗ್ಗೆ (ಜುಲೈ 1) ವೀರಪ್ಪ ಮೊಯ್ಲಿಯವರ ಪುತ್ರಿಯ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರಾಷ್ಟ್ರ ರಾಜಧಾನಿಯಲ್ಲಿ 88 ವರ್ಷಗಳ ಹಿಸ್ಟರಿ ಬ್ರೇಕ್, 2 ದಿನ ಭಾರೀ ಮಳೆ ಅಲರ್ಟ್!!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News