ಬೆಂಗಳೂರು: ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್, ಸಿಡಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ವಹಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಮಹಿಳಾ ಘಟಕದ ಅಧ್ಯಕ್ಷೆ ಕುಶಾಲಾ ಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
“ವಿಡಿಯೊ ಕುರಿತು ವಿಧಿವಿಜ್ಞಾನ ಪರೀಕ್ಷೆ ನಡೆಸಿ ವಂಚಕನನ್ನು ಬಂಧಿಸಬೇಕು. ಆತ ಎಷ್ಟೇ ಪ್ರಭಾವಿಯಾದರೂ ಕಾನೂನುಬದ್ಧ ಕ್ರಮಕೈಗೊಳ್ಳಬೇಕು. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಬೇಕು. ವಿಡಿಯೋಗಳನ್ನು ಹಂಚಿಕೆ ಮಾಡುತ್ತಿರುವವರಿಗೆ ಕಡಿವಾಣ ಹಾಕಬೇಕು” ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ರಾತ್ರಿ ಊಟದ ನಂತರ ಈ ತರಕಾರಿ ತಿಂದರೆ ಬ್ಲಡ್ ಶುಗರ್ ಸಂಪೂರ್ಣ ಹತೋಟಿಯಲ್ಲಿ ಇರುತ್ತೆ! ಯಾವ ಪಥ್ಯದ ಅಗತ್ಯವೂ ಇರಲ್ಲ!
ಹಾಸನದ ಪ್ರಭಾವಿ ರಾಜಕಾರಣಿ ಕುಟುಂಬದ ಸಂಸದರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿರುವುಕ್ಕೆ ಸಂಬಂಧಿಸಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, “ಕೃತ್ಯ ಎಸಗಿರುವ ವ್ಯಕ್ತಿ ಯಾವನೇ ಆಗಿರಲಿ, ನಾವು ಮೊದಲು ಸಂತ್ರಸ್ತೆಯರ ರಕ್ಷಣೆಗೆ ನಿಲ್ಲಬೇಕು. ಸಾವಿರಾರು ಮಹಿಳೆಯರು ವಂಚನೆಗೆ ಒಳಗಾಗಿರುವುದಲ್ಲದೆ, ವಿಡಿಯೊ ಸಾಮಾಜಿಕ ತಾಣಗಳಲ್ಲಿ ಓಡಾಡುತ್ತಿರುವುದರಿಂದ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮೊದಲಾಗಬೇಕು. ಓರ್ವ ಅಭ್ಯರ್ಥಿ ಮೇಲಿನ ರಾಜಕೀಯ ದ್ವೇಷಕ್ಕೆ ಸಾವಿರಾರು ಮಹಿಳೆಯರ ಬದುಕು ನರಕವಾಗುವುದನ್ನು ಸಹಿಸಲಾಗುವುದಿಲ್ಲ. ಅಶ್ಲೀಲ ವಿಡಿಯೊಗಳನ್ನು ಹಂಚಿದರೆ ಅದರಲ್ಲಿರುವ ಮಹಿಳೆಯರ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಕೊಂಚವೂ ಯೋಚಿಸದಿರುವುದು ದುರಂತ” ಎಂದು ಬೇಸರ ವ್ಯಕ್ತಪಡಿಸಿದರು.
“ಎರಡು ಸಾವಿರಕ್ಕೂ ಹೆಚ್ಚು ಖಾಸಗಿ ವಿಡಿಯೋಗಳು ಹರಿದಾಡುತ್ತಿವೆ ಎನ್ನಲಾಗುತ್ತಿದೆ. ಅಷ್ಟೂ ಮಂದಿ ಸಂತ್ರಸ್ತೆಯರ ಪರಿಸ್ಥಿತಿ ಏನಾಗಬೇಕು? ಅವರ ಕುಟುಂಬ ಸದಸ್ಯರಿಗೆ ಖಾಸಗಿ ವಿಡಿಯೊಗಳು ಲಭ್ಯವಾದರೆ ಏನೇನು ದುರಂತಗಳಾಗುತ್ತವೆ? ಮುಂದಾಗಬಹುದಾದ ದುಷ್ಪರಿಣಾಮಗಳಿಗೆ ಯಾರು ಹೊಣೆ? ವಿಡಿಯೊಗಳ ಹಂಚಿಕೆಗೆ ತಡೆಯೊಡ್ಡುವ ನಿಟ್ಟಿನಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ? ಹೆಣ್ಮಕ್ಕಳ ಬದುಕು ಬೀದಿಗೆ ಬಿದ್ದರೂ ಬೀಳಲಿ, ನಮಗೆ ರಾಜಕೀಯ ಲಾಭವಾದರೆ ಸಾಕು ಎಂಬ ಧೋರಣೆಯನ್ನು ರಾಜ್ಯ ಸರ್ಕಾರ ಅನುಸರಿಸುತ್ತಿದೆಯೇ?” ಎಂದು ಖಾರವಾಗಿ ಪ್ರಶ್ನಿಸಿದರು.
ಇದನ್ನೂ ಓದಿ: ಮುಂಜಾನೆ ಎದ್ದಂತೆ ಮೊಸರಿಗೆ ಈ ಕಪ್ಪು ಬೀಜ ಬೆರೆಸಿ ತಿನ್ನಿ: ದಿನಪೂರ್ತಿ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಯಾವ ಔಷಧಿಯೂ ಬೇಕಿಲ್ಲ
ಅಧಿಕಾರದ ಪ್ರಭಾವದಿಂದ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡಿರುವುದು ಎಷ್ಟು ದೊಡ್ಡ ಅಪರಾಧವೋ, ವಿಡಿಯೊಗಳನ್ನು ಹಂಚಿಕೆ ಮಾಡುತ್ತಿರುವುದೂ ಅಷ್ಟೇ ದೊಡ್ಡ ಅಪರಾಧವಾಗಿದೆ. ಇವರೆಲ್ಲರೂ ಮಹಿಳೆಯರ ಪಾಲಿನ ರಾಕ್ಷಸರಾಗಿದ್ದಾರೆ. ಮಹಿಳೆಯರು ಎಚ್ಚೆತ್ತುಕೊಳ್ಳಬೇಕು, ಯಾವುದೇ ಪ್ರಭಾವಕ್ಕೆ ಒಳಗಾಗಿ ಇಂತಹ ಸಂಕಷ್ಟದ ಪರಿಸ್ಥಿತಿಗೆ ಸಿಕ್ಕಿಹಾಕಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ