ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ

ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು.

Written by - Prashobh Devanahalli | Last Updated : Jun 27, 2024, 07:08 PM IST
    • ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಕಠಿಣ ಕ್ರಮ
    • ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ
    • ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ
ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ title=
Lakshmi Hebbalkar

ಯರಗಟ್ಟಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Viral Video: ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ಬ್ಯಾಂಕ್ ಉದ್ಯೋಗಿ ಸಾವು!

ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು. ಅಂಗನವಾಡಿ ಮಕ್ಕಳು ಸ್ವಂತ ಮಕ್ಕಳು ಎಂದು ತಿಳಿದು ಉತ್ತಮ ಗುಣಮಟ್ಟದ ಪೂರಕ ಆಹಾರಗಳನ್ನು ಒದಗಿಸಬೇಕು. ಕಳಪೆ ಆಹಾರಗಳ ಪೂರೈಕೆಯನ್ನು ಯಾವುದೇ ಕಾರಣದಿಂದ ಸಹಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಸ್ಥಳೀಯ ಮಟ್ಟದಲ್ಲಿ ತಪ್ಪುಗಳಾದರೆ ಅದು ಮೇಲ್ಮಟ್ಟದವರೆಗೆ ಎಲ್ಲರಿಗೂ ಕೆಟ್ಟ ಹೆಸರು ತರುತ್ತದೆ. ಮಕ್ಕಳ ಹಾಗೂ ಮಹಿಳಾಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಗುಣಮಟ್ಟಕ್ಕೆ ಅತೀ ಹೆಚ್ಚು ಆದ್ಯತೆ ನೀಡಬೇಕು. ಘಟಕದ ಪ್ರತಿಯೊಂದು ಉತ್ಪನ್ನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಚಿವರು, ಯಾವುದಾದರೂ ಕಳಪೆ ಎಂದು ಕಂಡು ಬಂದರೆ ಘಟಕದವರೇ ತಿರಸ್ಕರಿಸಬೇಕು. ಎಲ್ಲ ಉತ್ಪನ್ನಗಳನ್ನು ಸ್ವಚ್ಛಗೊಳಿಸಿ ಪೂರೈಸಬೇಕು. ಈ ವಿಷಯದಲ್ಲಿ ತಪ್ಪಾದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ: ವಿಶ್ವಕಪ್ ಸೆಮಿಫೈನಲ್’ಗೂ ಮುನ್ನ ಮಹತ್ವದ ಹೇಳಿಕೆ ನೀಡಿದ ನಾಯಕ ರೋಹಿತ್ ಶರ್ಮಾ! ಏನಂದ್ರು ಕ್ಯಾಪ್ಟನ್

ಅಂಗನವಾಡಿ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಭಾಗಗಳನ್ನು ಸಂಪೂರ್ಣ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಈಗಾಗಲೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಎಂಎಸ್ ಪಿಸಿ ಘಟಕಗಳ ಸುಧಾರಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News