Hassan PenDrive Case: SIT ತನಿಖೆ ಆದೇಶಕ್ಕೂ ಮುನ್ನವೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ!

Hassan Pen Drive Case: ಸಂಸದ ಪ್ರಜ್ವಲ್ ರೇವಣ್ಣರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದ ಆರೋಪ ಕೇಳಿಬಂದಿದ್ದು, ಈ ಪ್ರಕರಣದ ತನಿಖೆಗೆ ಸರ್ಕಾರ SIT ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Written by - Puttaraj K Alur | Last Updated : Apr 28, 2024, 02:01 PM IST
  • ಹಾಸನದ ಅಶ್ಲೀಲ ವಿಡಿಯೋ ತುಣುಕು ಪ್ರಕರಣದ ತನಿಖೆಗೆ ಆದೇಶಿಸಿ ರಾಜ್ಯ ಸರ್ಕಾರ SIT ರಚಿಸಿದೆ
  • ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ
  • ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ
Hassan PenDrive Case: SIT ತನಿಖೆ ಆದೇಶಕ್ಕೂ ಮುನ್ನವೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ! title=
Hassan Pen Drive Case

Hassan Pen Drive Case: ಹಾಸನದ ಅಶ್ಲೀಲ ವಿಡಿಯೋ ತುಣುಕು ಪ್ರಕರಣದ ತನಿಖೆಗೆ ಆದೇಶಿಸಿ ರಾಜ್ಯ ಸರ್ಕಾರವು SIT ರಚಿಸಿದೆ. ಆದರೆ ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ. ಶನಿವಾರ ಮುಂಜಾನೆ ೩ ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್‌ ವಿದೇಶಕ್ಕೆ ತೆರಳಿದ್ದಾರೆ ಅಂತಾ ಹೇಳಲಾಗಿದೆ.

LH 755 ಲುಫ್ತಾನ್ಸಾ ಏರ್‌ಲೈನ್ಸ್ ಮೂಲಕ KIALನಿಂದ ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ಪ್ರಜ್ವಲ್‌ ಹೋಗಿದ್ದಾರೆಂದು ತಿಳಿದುಬಂದಿದೆ. ರಾಜ್ಯ ಸರ್ಕಾರವು SIT ತನಿಖೆಗೆ ಆದೇಶ ಮಾಡುವ ಮುಂಚೆಯೇ ಅವರು ವಿದೇಶಕ್ಕೆ ಹೋಗಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಸ್ಪರ್ಧಿಸಿರುವ ಹಾಸನ ಸೇರಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿತ್ತು. ಚುನಾವಣೆ ಮುಗಿದ ಹಿನ್ನೆಲೆ ಅವರು ವಿದೇಶಕ್ಕೆ ಹೋಗಿರಬಹುದು ಎಂದು ಹೇಳಲಾಗಿದೆ.

ಇದನ್ನೂ ಓದಿ: ಆಸ್ತಿ ಲೂಟಿಗೆ ಮುಂದಾದ ಕಾಂಗ್ರೆಸ್: ನರೇಂದ್ರ ಮೋದಿ

SIT ತನಿಖೆಗೆ ಸಿದ್ದರಾಮಯ್ಯ ಆದೇಶ

ಸಂಸದ ಪ್ರಜ್ವಲ್ ರೇವಣ್ಣರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದ ಆರೋಪ ಕೇಳಿಬಂದಿದ್ದು, ಈ ಪ್ರಕರಣದ ತನಿಖೆಗೆ ಸರ್ಕಾರ SIT ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಸಿಎಂ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹಲವಾರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. 

ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆ SIT ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆʼ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕವೂ ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: ಹಾಸನ ಎಂಪಿ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ: ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ SIT ರಚನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News