ಹುದ್ದೆಯ ಅಧಿಕಾರ ಸ್ವೀಕರಿಸುವಂತೆ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಆದೇಶ

ವರ್ಗಾವಣೆ ಮಾಡಲಾಗಿರುವ ಉದ್ಯೋಗ ಮತ್ತು ತರಬೇತಿ ಕೇಂದ್ರದ ಆಯುಕ್ತ ಹುದ್ದೆಯ ಅಧಿಕಾರ ಸ್ವೀಕರಿಸಿ ಕಾರ್ಯ ನಿರ್ವಹಿಸುವಂತೆ ಹೈಕೋರ್ಟ್ ರೋಹಿಣಿ ಸಿಂಧೂರಿ ಅವರಿಗೆ ಮೌಖಿಕ ನಿರ್ದೇಶನ ನೀಡಿದೆ.

Last Updated : Apr 27, 2018, 06:47 PM IST
ಹುದ್ದೆಯ ಅಧಿಕಾರ ಸ್ವೀಕರಿಸುವಂತೆ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಆದೇಶ title=

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು, ತಮ್ಮ ವರ್ಗಾವಣೆ ಕುರಿತು ಹೈಕೋರ್ಟ್'ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಸಿಎಟಿ ಆದೇಶಕ್ಕಷ್ಟೇ ತಡೆ ನೀಡಿದ್ದು ಸರ್ಕಾರದ ವರ್ಗಾವಣಾ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ. 

ಅಲ್ಲದೆ, ಈಗ ವರ್ಗಾವಣೆ ಮಾಡಲಾಗಿರುವ ಉದ್ಯೋಗ ಮತ್ತು ತರಬೇತಿ ಕೇಂದ್ರದ ಆಯುಕ್ತ ಹುದ್ದೆಯ ಅಧಿಕಾರ ಸ್ವೀಕರಿಸಿ ಕಾರ್ಯ ನಿರ್ವಹಿಸುವಂತೆ ಹೈಕೋರ್ಟ್ ಮೌಖಿಕ ನಿರ್ದೇಶನ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆ ಮೇ 30ಕ್ಕೆ ಮುಂದೂಡಿದೆ.

ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ಸರ್ಕಾರವು ಬೆಂಗಳೂರು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಸ್ಥಾನಕ್ಕೆ ವರ್ಗಾವಣೆ ಮಾಡಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದ ರೋಹಿಣಿ ಅವರಿಗೆ ಅಲ್ಲಿ ಹಿನ್ನಡೆಯಾಗಿತ್ತು. ನಂತರ ಅವರು ತಮ್ಮ ವರ್ಗಾವಣೆಯನ್ನು ರದ್ದುಗೊಳಿಸುವಂತೆ ಹೈಕೋರ್ಟ್'ನಲ್ಲಿ ಮನವಿ ಮಾಡಿದ್ದರು. ಆದರೀಗ ಹೈಕೋರ್ಟ್ ಅಧಿಕಾರ ಸ್ವಿಕರಿಸುವಂತೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರೋಹಿಣಿ ಸಿಂಧುರಿ ಅವರು ವರ್ಗಾವಣೆ ಮಾಡಲಾಗಿರುವ ಉದ್ಯೋಗ ಮತ್ತು ತರಬೇತಿ ಕೇಂದ್ರದ ಆಯುಕ್ತ ಹುದ್ದೆಯ ಅಧಿಕಾರ ಸ್ವೀಕರಿಸುವುದು ಅನಿವಾರ್ಯವಾಗಿದೆ. 

Trending News