ಪ್ರಜ್ವಲ್‌ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದೇ ದೇವೇಗೌಡರು: ಸಿಎಂ ಸಿದ್ದರಾಮಯ್ಯ ಆರೋಪ

Hassan Pen Drive Case: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವತ್ಕಲ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇವೇಗೌಡರೇ ಪ್ಲ್ಯಾನ್‌ ಮಾಡಿ ತಮ್ಮ ಮೊಮ್ಮಗನನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಅಂತಾ ಆರೋಪಿಸಿದ್ದಾರೆ.

Written by - Puttaraj K Alur | Last Updated : May 1, 2024, 10:25 PM IST
  • ಪ್ರಜ್ವಲ್‌ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು
  • ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣಕ್ಕೂ ಡಿ.ಕೆ.ಶಿವಕುಮಾರ್‌ಗೂ ಯಾವುದೇ ಸಂಬಂಧವಿಲ್ಲ
  • ದೇವೇಗೌಡರೇ ಪ್ಲ್ಯಾನ್‌ ಮಾಡಿ ಮೊಮ್ಮಗನನ್ನು ವಿದೇಶಕ್ಕೆ ಕಳುಹಿಸಿದ್ದಾರೆಂದ ಸಿದ್ದರಾಮಯ್ಯ
ಪ್ರಜ್ವಲ್‌ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದೇ ದೇವೇಗೌಡರು: ಸಿಎಂ ಸಿದ್ದರಾಮಯ್ಯ ಆರೋಪ title=
ದೇವೇಗೌಡ ವಿರುದ್ಧ ಸಿದ್ದರಾಮಯ್ಯ ಆರೋಪ!

Hassan Pen Drive Case: ಅಶ್ಲೀಲ ವಿಡಿಯೋ ಹಾಗೂ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್.ಡಿ.ರೇವಣ್ಣರ ವಿರುದ್ಧ FIR ದಾಖಲಾಗಿದ್ದು, ಈಗಾಗಲೇ SIT ತನಿಖೆ ನಡೆಯುತ್ತಿದೆ. ವಿಚಾರಣೆಗೆ ಹಾಜರಾಗುವಂತೆ ಅಪ್ಪ-ಮಗನಿಗೆ ಈಗಾಗಲೇ SIT ನೋಟಿಸ್‌ ಕೂಡ ಜಾರಿ ಮಾಡಿದೆ.

ಧೈರ್ಯವಾಗಿ ಎಲ್ಲವನ್ನೂ ಎದುರಿಸುವುದಾಗಿ ಎಚ್‌.ಡಿ.ರೇವಣ್ಣ ಹೇಳಿದ್ದರೆ,  ತಮ್ಮ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಪ್ರಜ್ವಲ್‌ ರೇವಣ್ಣ, SIT ವಿಚಾರಣೆಗೆ ಹಾಜರಾಗಲು ೭ ದಿನ ಕಾಲಾವಕಾಶ ಕೇಳಿದ್ದಾರೆ. 

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ವಾಪಸ್ ಕರೆತರಲು ಪ್ರಧಾನಿ ಮೋದಿಗೆ ಸಿಎಂ ಪತ್ರ 

ಇನ್ನೂ ಈ ಪ್ರಕರಣ ಸಂಬಂಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ಪ್ರಜ್ವಲ್‌ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವತ್ಕಲ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇವೇಗೌಡರೇ ಪ್ಲ್ಯಾನ್‌ ಮಾಡಿ ತಮ್ಮ ಮೊಮ್ಮಗನನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಅಂತಾ ಆರೋಪಿಸಿದ್ದಾರೆ..

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣಕ್ಕೂ ಡಿ.ಕೆ.ಶಿವಕುಮಾರ್‌ ಅವರಿಗೂ ಯಾವುದೇ ಸಂಬಂಧವಿಲ್ಲ. ವಿನಾಕಾರಣ ಅವರ ವಿರುದ್ಧ ಆರೋಪ ಮಾಡಲಾಗುತ್ತಿದೆ. ಆರೋಪ ಕೇಳಿಬಂದ ಕ್ಷಣವೇ ಪ್ರಜ್ವಲ್‌ ವಿದೇಶಕ್ಕೆ ಹಾರಿದ್ದಾರೆ. ದೇವೇಗೌಡರೇ ಆತನನ್ನು ವಿದೇಶಕ್ಕೆ ಕಳುಹಿಸಿದ್ದಾರೆ. ಪ್ರಜ್ವಲ್‌ಗೆ ವೀಸಾ ಕೊಟ್ಟಿದ್ದು ಯಾರು..? ಕೇಂದ್ರ ಸರ್ಕಾರ ತಾನೇ ಎಂದು ಕೇಂದ್ರ ಬಿಜೆಪಿ ಸರ್ಕಾರವನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ: ಬಸವರಾಜ ಬೊಮ್ಮಾಯಿ

ಕಾರ್ತೀಕ್‌ ಎಂಬಾತ ಪ್ರಜ್ವಲ್‌ ರೇವಣ್ಣರ ಕಾರು ಚಾಲಕನಾಗಿದ್ದ. ಆತನೇ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್‌ ಅನ್ನು ಬಿಜೆಪಿ ಮುಖಂಡನ ಕೈಗೆ ಕೊಟ್ಟಿದ್ದ. ಈ ಬಗ್ಗೆ ಆತನೇ ಹೇಳಿಕೊಂಡಿದ್ದಾನೆ. ಆದರೆ ಕುಮಾರಸ್ವಾಮಿ ರಾಜಕೀಯಕ್ಕಾಗಿ ಡಿ.ಕೆ.ಶಿವಕುಮಾರ್‌ ಹೆಸರು ಹೇಳುತ್ತಿದ್ದಾರೆ ಅಂತಾ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News