ಹಾಲು ಉತ್ಪಾದಕರಿಗೆ ಬಾಕಿ ಸಬ್ಸಿಡಿ ಬಿಡುಗಡೆ ಮಾಡಿ : ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿಯವರು ಪ್ರಶ್ನೆ ಮಾಡಿದರು.

Written by - Prashobh Devanahalli | Edited by - Krishna N K | Last Updated : May 1, 2024, 04:40 PM IST
    • ಹಾಲು ಉತ್ಪಾದಕರಿಗೆ ಬಾಕಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಿ.
    • ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್‌ಡಿಕೆ ಒತ್ತಾಯ.
    • ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಿಡುಗಡೆಗೆ ಆಗ್ರಹ
ಹಾಲು ಉತ್ಪಾದಕರಿಗೆ ಬಾಕಿ ಸಬ್ಸಿಡಿ ಬಿಡುಗಡೆ ಮಾಡಿ : ಹೆಚ್.ಡಿ.ಕುಮಾರಸ್ವಾಮಿ ಆಗ್ರಹ title=

ಬೆಂಗಳೂರು: ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪೋಸ್ಟದಿರುವ ಅವರು; ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲಿನ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಡೆ ಖಂಡನೀಯ. ಹಾಲು ಉತ್ಪಾದಕರ ಸಬ್ಸಿಡಿ ಹಣ ₹700 ಕೋಟಿ ಬಾಕಿ ಉಳಿಸಿಕೊಂಡಿರುವ ಸರಕಾರದ ಆತ್ಮಸಾಕ್ಷಿ ಸತ್ತು ಹೋಗಿದೆಯಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:"ಪೆನ್‌ ಡ್ರೈವ್‌ ವಿಚಾರ ಕುಮಾರಸ್ವಾಮಿ ಹಾಗೂ ಬಿಜೆಪಿಯ ಎಲ್ಲಾ ನಾಯಕರಿಗೆ ಮೊದಲೇ ತಿಳಿದಿತ್ತು"

ಕೃಷಿ ಅನುದಾನಕ್ಕೆ 32% ಕತ್ತರಿ ಹಾಕಿದ್ದಾಯಿತು. ಈಗ ಹೈನುಗಾರರ ಸಬ್ಸಿಡಿಗೂ ಪಂಗನಾಮ. ಒಂದು ಲೀಟರ್ ಹಾಲಿನ ಸಬ್ಸಿಡಿಯನ್ನು ₹7 ಹೆಚ್ಚಿಸುತ್ತೇವೆ ಎಂದು ಚುನಾವಣೆ ವೇಳೆ ಕಾಂಗ್ರೆಸ್ ಸುಳ್ಳು ಹೇಳಿದ್ದೇ ಹೇಳಿದ್ದು. ಹೆಚ್ಚಿಸುವ ಮಾತಿರಲಿ, ಇದ್ದ ಸಬ್ಸಿಡಿಯನ್ನೂ (ಲೀಟರ್ ಹಾಲಿಗೆ ₹5) ಕೊಡದೇ 7 ತಿಂಗಳಿಂದ ಸತಾಯಿಸುತ್ತಿದೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.

ಗೋವಿನ ಆಹಾರವಾದ ಹಿಂಡಿ, ಬೂಸಾ ಬೆಲೆ ಗಗನಕ್ಕೇರಿದೆ. ಮೇವೂ ಸಿಗುತ್ತಿಲ್ಲ. ಇಂಥ ಕಡು ಸಂಕಷ್ಟದಲ್ಲಿರುವ ಹಾಲು ಉತ್ಪಾದಕರಿಗೆ ಕೂಡಲೇ ರಾಜ್ಯ ಸರಕಾರ ಸಬ್ಸಿಡಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News