ಬೆಂಗಳೂರು: ‘ಆಪರೇಷನ್ ಗಂಗಾ’(Operation Ganga) ಹೆಸರಿನಲ್ಲಿ ಕೇಂದ್ರ ಸರ್ಕಾರ ಉಕ್ರೇನ್ ನಿಂದ ಏರ್ ಲಿಫ್ಟ್ ಮಾಡಿದ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ, ‘ನೀಟ್ ಪರೀಕ್ಷೆ’(NEET Exam)ನಿಲ್ಲಲಿ ಎಂದು ಆಗ್ರಹಿಸಿದ್ದಾರೆ. ‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರ್ಕಾರ ಉಕ್ರೇನ್ʼನಿಂದ ವಿದ್ಯಾರ್ಥಿಗಳನ್ನು ಏರ್ʼಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ(Russia-Ukraine War) ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ’ ಅಂತಾ ಹೇಳಿದ್ದಾರೆ.
'ಆಪರೇಷನ್ ಗಂಗಾ' ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ʼನಿಂದ ವಿದ್ಯಾರ್ಥಿಗಳನ್ನು ಏರ್ʼಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. 1/5
— H D Kumaraswamy (@hd_kumaraswamy) March 7, 2022
ಇದನ್ನೂ ಓದಿ: Siddaramaiah: ಸಿದ್ದರಾಮಯ್ಯರ ‘ಅಡ್ಡಕಸುಬಿ’ ಬಜೆಟ್ ಹೇಳಿಕೆಗೆ ಬಿಜೆಪಿ ಸಿಡಿಮಿಡಿ
‘ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್ʼ(Ukraine)ಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ’ ಅಂತಾ ಎಚ್ಡಿಕೆ ಬೇಸರ ವ್ಯಕ್ತಪಡಿಸಿದ್ದಾರೆ.
‘ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ’ ಅಂತಾ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮೇಕೆದಾಟು ವಿಚಾರವನ್ನಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಿಂದ ಚುನಾವಣಾ ಆಟ: ಎಚ್ಡಿಕೆ
ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ. 3/5
— H D Kumaraswamy (@hd_kumaraswamy) March 7, 2022
‘2,65,720 ಕೋಟಿ ರೂ.ಗಳಷ್ಟು ಬಜೆಟ್ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರ್ಕಾರ(Central Government)ವೇ ನೀಡಲಿ. ನೀಟ್ ಮೂಲಕ ಶೇ.50ರಷ್ಟು ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರ್ಕಾರಗಳು ಅಂತಃಕರಣದಿಂದ ಆಲೋಚಿಸಲಿ ಎನ್ನುವುದು ನನ್ನ ಅಭಿಪ್ರಾಯ’ ಅಂತಾ ಹೇಳಿದ್ದಾರೆ.
‘ವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ‘ಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜೊತೆ ವ್ಯಾಪಾರೀಕರಣ ಮಾಡುವುದು ಬೇಡ.ʼ ಕೇಂದ್ರ-ರಾಜ್ಯ ಸರ್ಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಅಂತಾ ಕುಮಾರಸ್ವಾಮಿ ಹೇಳಿದ್ದಾರೆ.
ʼವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ʼಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ.ʼ ಕೇಂದ್ರ-ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. 5/5#ನೀಟ್_ನಿಲ್ಲಲಿ
— H D Kumaraswamy (@hd_kumaraswamy) March 7, 2022
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.