ದೇವೆಗೌಡರ ಕುಟುಂಬ ಆಯಿತು, ಈಗ ಯಡಿಯೂರಪ್ಪ ಕುಟುಂಬದ ವಿರುದ್ಧ ಕಾಂಗ್ರೆಸ್ ಸಂಚು : ಹೆಚ್‌ಡಿಕೆ

82 ವರ್ಷದ ಯಡಿಯೂರಪ್ಪ ಅವರ ಮೇಲೆ ಕಾಂಗ್ರೆಸ್‌ ಸೇಡಿನ ರಾಜಕಾರಣ ಮಾಡುತ್ತಿದೆ. ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿಯವರು ಗುಡುಗಿದರು.

Written by - Prashobh Devanahalli | Last Updated : Jun 14, 2024, 08:00 PM IST
    • ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ ಕೇಂದ್ರ ಸಚಿವರಾದ HD ಕುಮಾರಸ್ವಾಮಿ ಆರೋಪ||
    • 82 ವರ್ಷದ ಯಡಿಯೂರಪ್ಪ ಮೇಲೆ ಕಾಂಗ್ರೆಸ್‌ ಸೇಡಿನ ರಾಜಕಾರಣ
    • ನಾನು ಕೇಂದ್ರ ಸಚಿವನಾದ ಮೇಲೆ ಕೆಲವರಿಗೆ ನಿದ್ದೆ ಬರುತ್ತಿಲ್ಲ
ದೇವೆಗೌಡರ ಕುಟುಂಬ ಆಯಿತು, ಈಗ ಯಡಿಯೂರಪ್ಪ ಕುಟುಂಬದ ವಿರುದ್ಧ ಕಾಂಗ್ರೆಸ್ ಸಂಚು : ಹೆಚ್‌ಡಿಕೆ title=

ಬೆಂಗಳೂರು: ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಬೇಕು ಎನ್ನುವ ಷಡ್ಯಂತ್ರ ಆಯಿತು ಈಗ ಯಡಿಯೂರಪ್ಪ ಅವರ ಕುಟುಂಬವನ್ನು ರಾಜಕೀಯವಾಗಿ ಮುಗಿಸುವ ಕುತಂತ್ರ ಆರಂಭವಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.

ಕೇಂದ್ರ ಸಚಿವರಾದ ಮೇಲೆ ರಾಜ್ಯಕ್ಕೆ ಮೊದಲ ಭೇಟಿ ಕೊಟ್ಟ ವೇಳೆ ಜಾತ್ಯತೀತ ಜನತಾದಳ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. 82 ವರ್ಷದ ಯಡಿಯೂರಪ್ಪ ಅವರ ಮೇಲೆ ಕಾಂಗ್ರೆಸ್‌ ಸೇಡಿನ ರಾಜಕಾರಣ ಮಾಡುತ್ತಿದೆ. ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿ ಯುವ ಕೆಲಸ ಮಾಡಲಾಗುತ್ತಿದೆ. ಅವರ ಪ್ರಯತ್ನ ಫಲಪ್ರದ ಆಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪರಿಗೆ ಜಾಮೀನು ನೀಡಿರುವುದು ನ್ಯಾಯ ಸಮ್ಮತ: ಬಸವರಾಜ ಬೊಮ್ಮಾಯಿ

ಡಿಕೆಶಿ ವಿರುದ್ಧ HDK ಆಕ್ರೋಶ : ನಾಲ್ಕು ತಿಂಗಳ ಹಿಂದಿನ ಪ್ರಕರಣ ಇದು. ಇವತ್ತು ಯಡಿಯೂರಪ್ಪ ಅವರ ಮೇಲೆ ಜಾಮೀನು ರಹಿತ ಕೇಸ್ ಹಾಕಲು ಹೊರಟಿದ್ದಾರೆ. ನಾವು ಎಂಟು ಸ್ಥಾನ ಗೆದ್ದಿದ್ದೀವಿ ಬೀಗುತ್ತಿದ್ದಾರೆ. ಹಾಸನದಲ್ಲಿ ಚುನಾವಣೆಯಲ್ಲಿ ಗೆಲ್ಲಲು ಪೆನ್ ಡ್ರೈವ್ ಗಳನ್ನು ಹರಿಬಿಟ್ಟು ನೀಚ ರಾಜಕಾರಣ ಮಾಡಿದವರು ಇವರು. ಪೆನ್ ಡ್ರೈವ್ ಪ್ರಕರಣದಲ್ಲಿ ಆಡಿಯೋ ಬಂತಲ್ಲಾ, ಅದರ ಬಗ್ಗೆ ಏನು ಕ್ರಮ ತಗೊಂಡರು? ಸಿಡಿ ಶಿವು ಅವರೇ, ನಾನು ಕೇಂದ್ರ ಸಚಿವನಾಗಿದ್ದೇನೆ. ಈಗ ನಾನು  ನಿಮ್ಮ ಮಟ್ಟಕ್ಕೆ ಇಳಿಯಲ್ಲ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಪ್ರಹಾರ ನಡೆಸಿದರು.

ನಾನು ಕೇಂದ್ರ ಸಚಿವನಾದ ಮೇಲೆ ಕೆಲವರಿಗೆ ನಿದ್ದೆ ಬರುತ್ತಿಲ್ಲ :  ನಾನು ಕೇಂದ್ರ ಸಚಿವನಾದ ಮೇಲೆ ಕೆಲವರಿಗೆ ಊಟ ಸೇರುತ್ತಿಲ್ಲ, ನಿದ್ದೆ ಬರುತ್ತಿಲ್ಲ. ನಾನು ಯಾರ ಮೇಲೂ ದ್ವೇಷ ಸಾಧಿಸಲ್ಲ. ಆ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವರು ತಿರುಗೇಟು ಕೊಟ್ಟರು. ನಾನು ಕೇಂದ್ರ ಸರಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವನಾಗಿರಬಹುದು. ರಾಜ್ಯದ ಹಿತವನ್ನು ಎಂದಿಗೂ ಮರೆಯಲಾರೆ. ಬನ್ನಿ, ಯಾವುದೇ ಇಲಾಖೆಯ ಏನೇ ಕೆಲಸಗಳು ಇದ್ದರೂ ಮಾಡಿಕೊಡುತ್ತೇನೆ. ನನಗೆ ಸ್ವಲ್ಪ ಸಮಯ ಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಇದನ್ನೂ ಓದಿ: ಎರಡು ದಿನಗಳ ದಕ್ಷಿಣ ಭಾರತ ಉತ್ಸವಕ್ಕೆ ಅರಮನೆ ಮೈದಾನ ಸಜ್ಜು : ಪ್ರವಾಸೋದ್ಯಮ ಇಲಾಖೆ ಮತ್ತು ಎಫ್.ಕೆ.ಸಿ.ಸಿಐ ನಿಂದ ಆಯೋಜನೆ

ರಾಜಕೀಯದಲ್ಲಿ ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನೆರೆಯ ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಹಿಂದಿನ ಚುನಾವಣೆಯಲ್ಲಿ ಎಷ್ಟು ಸ್ಥಾನಗಳನ್ನು ಗೆದ್ದಿದ್ದರು? ಕಡೆಗೆ ಅನೇಕ ಶಾಸಕರು ಅವರನ್ನು ಬಿಟ್ಟು ಹೋದರು. ಅವರನ್ನು ಜೈಲಿಗೂ ಕಳಿಸಿದರು. ಈಗ ಮತ್ತೆ ಎಷ್ಟು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದರು ಎನ್ನುವುದನ್ನು ಗಮನಿಸಬೇಕು. ಕರ್ನಾಟಕದಲ್ಲಿಯೂ ಇದು ನಡೆಯುತ್ತದೆ. ಒಂದು ಸಲ ಅವಕಾಶ ಕೊಡಿ ಅಂತಾ ಕೇಳಿದೆ. ನಾನು ಹೇಳಿದ ಕಾರ್ಯಕ್ರಮಗಳನ್ನು ಅನುಷ್ಟಾನ ಮಾಡಿಡಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದೆ. ಅದಕ್ಕೂ ಅವಹೇಳನ ಮಾಡಿದರು. ಚಕ್ರ ತಿರುಗುತ್ತದೆ ಎನ್ನುವುದನ್ನು ಯಾರೂ ಮರೆಯಬಾರದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಾರ್ಯಕರ್ತರ ಗೌರವ ಉಳಿಸುವ ನಿಟ್ಟಿನಲ್ಲಿ ನಿಮ್ಮ ಕೆಲಸ ಮಾಡುತ್ತೇನೆ. ಕುಮಾರಸ್ವಾಮಿ ಕೇಂದ್ರದ ಸಚಿವರಾಗಿದ್ದಾರೆ. ನಮ್ಮ ಕೈಗೆ ಸಿಗಲ್ಲ ಎಂದು ಯಾರೂ ಭಾವಿಸಬೇಡಿ. ಯಾವುದೇ ಸಮಯದಲ್ಲಿ ಬಂದು ನಿಮ್ಮ ಕಷ್ಟ ಹೇಳಿಕೊಳ್ಳಬಹುದು. ನಾನೆಂದಿಗೂ ನಿಮ್ಮ ಜತೆಯಲ್ಲಿಯೇ ಇರುತ್ತೇನೆ ಎಂದರು ಅವರು.

ಇದನ್ನೂ ಓದಿ:ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿಕೆ ಶಿವಕುಮಾರ್

ಮೋದಿ ಅವರಿಗೆ ಕೃತಜ್ಞತೆ : ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ನಂಬಿಕೆ ಇರಿಸಿ ಎರಡು ಖಾತೆಗಳನ್ನು ಕೊಟ್ಟಿದ್ದಾರೆ. ಅವರ ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ. ಹಾಗೆಯೇ ನಾಡಿನ, ದೇಶದ ಹಿತಕ್ಕಾಗಿ ದುಡಿಯುತ್ತೇನೆ. ಉದ್ಯೋಗ ಸೃಷ್ಟಿ, ಉತ್ಪಾದನೆ ಹೆಚ್ಚಳ, ಜಿಡಿಪಿ ವೃದ್ಧಿ ಸೇರಿದಂತೆ ದೇಶಕ್ಕೆ ಒಳ್ಳೆಯದಾಗುವ ಕೆಲಸ ಮಾಡುತ್ತೇನೆ. ಕೈಗಾರಿಕಾ ಕ್ಷೇತ್ರದಲ್ಲಿ ಸಾಮಾನ್ಯ ಜನರಿಗೂ ಉಪಯೋಗ ಆಗುವ ರೀತಿಯಲ್ಲಿ ದುಡಿಯುತ್ತೇನೆ. ನನ್ನ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಸಚಿವರು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News