ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿ

ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದರು.

Written by - Prashobh Devanahalli | Edited by - Krishna N K | Last Updated : Apr 28, 2024, 06:16 PM IST
    • ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳ ರಚನೆ
    • ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ.
    • ಪ್ರಕರಣದ ಕುರಿತು ಹೆಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ
ಹಾಸನ ಪ್ರಕರಣ, ಉಪ್ಪು ತಿಂದವರು ನೀರು ಕುಡಿಯುತ್ತಾರೆ : ಹೆಚ್.ಡಿ.ಕುಮಾರಸ್ವಾಮಿ title=

ಬೆಂಗಳೂರು : ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಈ ನೆಲದ ಕಾನೂನಿನ ಪ್ರಕಾರ ಯಾರೇ ತಪ್ಪು ಮಾಡಿರಲಿ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಅವರು. ತನಿಖೆಯ ಮೂಲಕ ಎಲ್ಲಾ ಸತ್ಯಾಂಶಗಳು ಹೊರಗೆ ಬರಲಿ. ಯಾರೇ ತಪ್ಪೆಸಗಿದ್ದರೂ, ಅವರು ಯಾರೇ ಆಗಿದ್ದರೂ ಯಾವುದೇ ಕಾರಣಕ್ಕೂ ಅವರನ್ನು ಕ್ಷಮಿಸುವ ಪ್ರಶ್ನೆ ಬರುವುದಿಲ್ಲ. ಆದ್ದರಿಂದ ತನಿಖೆಯ ವರದಿ ಸಂಪೂರ್ಣವಾಗಿ ಹೊರ ಬಂದ ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದರು.

ಇದನ್ನೂ ಓದಿ:  SIT ತನಿಖೆ ಆದೇಶಕ್ಕೂ ಮುನ್ನವೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ!

ಸಧ್ಯ ಹಾಸನದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರವು SIT ರಚಿಸಿದೆ. ಆದರೆ ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆಂದು ವರದಿಯಾಗಿದೆ. ಶನಿವಾರ ಮುಂಜಾನೆ 3 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್‌ ವಿದೇಶಕ್ಕೆ ತೆರಳಿದ್ದಾಗಿ ಹೇಳಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News