ಬೆಂಗಳೂರು: ರಾಜ್ಯದಲ್ಲಿ ಭಾರೀ ಕೋಲಾಹಲ ಎಬ್ಬಿಸಿರುವ ರಾಜ್ಯದ ಜನಪ್ರತಿನಿಧಿಗಳ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮೆ ವಿರುದ್ದ ಬಿಜೆಪಿ ನಾಯಕರ ಆರೋಪದ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತನಿಖೆ ಬೇಕಾದರೂ ನಡೆಯಲಿ. ರಾಜ್ಯದಲ್ಲೀಗ ಬಿಜೆಪಿಯದ್ದೆ ಸರ್ಕಾರವಿದೆ. ಅವರು ಯಾವುದೇ ತನಿಖೆ ನಡೆಸಲು ಸ್ವಾತಂತ್ಯವಿದೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಆದರೆ ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ ಎಂದು ತಿಳಿಯುತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಪೋಲೀಸ್ ಅಧಿಕಾರಿಗಳ ದೂರವಾಣಿ ಕದ್ದಾಲಿಕೆ ಪ್ರಕರಣ ಬಯಲಿಗೆ ಬಂದ ಬೆನ್ನಲ್ಲೇ, ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದವರು, ವಿರೋಧ ಪಕ್ಷ ಹಾಗೂ ಬಂಡಾಯ ಇದ್ದಿದ ಶಾಸಕರ ಕರೆಗಳ ಮೇಲೂ ನಿಗಾವಹಿಸಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಯಾಗಿದೆ.