ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದ ಹೆಚ್.ಡಿ ಕುಮಾರಸ್ವಾಮಿ

HD Kumaraswamy: ಬೆಂಗಳೂರಿನಲ್ಲಿ ಮಂಗಳವಾರ ಕರೆಯಲಾಗಿದ್ದ ತುರ್ತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮುಖಂಡರ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ. ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ಮಾಡಿದ್ದೇನೆ.

Written by - Prashobh Devanahalli | Edited by - Bhavishya Shetty | Last Updated : Mar 19, 2024, 07:20 PM IST
    • ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ
    • ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೆಚ್ಡಿಕೆ
    • ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಗೆ ಹೋಗುತ್ತಿದ್ದೇನೆ ಎಂದ ಮಾಜಿ ಸಿಎಂ
ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದ ಹೆಚ್.ಡಿ ಕುಮಾರಸ್ವಾಮಿ title=
HD Kumaraswamy

ಬೆಂಗಳೂರು: ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ:  Bharat Atta-Rice : ರೈಲು ನಿಲ್ದಾಣಗಳಲ್ಲಿಯೂ ಸಿಗುತ್ತದೆ ಅಗ್ಗದ ಅಕ್ಕಿ, ಗೋಧಿ ಹಿಟ್ಟು : 500 ನಿಲ್ದಾಣಗಳಲ್ಲಿದೆ ಈ ಸೌಲಭ್ಯ  

ಬೆಂಗಳೂರಿನಲ್ಲಿ ಮಂಗಳವಾರ ಕರೆಯಲಾಗಿದ್ದ ತುರ್ತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಮುಖಂಡರ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ. ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ಮಾಡಿದ್ದೇನೆ. ನಾನು ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಗೆ ಹೋಗುತ್ತಿದ್ದೇನೆ. ನಾನು ಬರುವವರೆಗೂ ಒಮ್ಮತವಾಗಿ ಮೈತ್ರಿ ಧರ್ಮಕ್ಕೆ ಬದ್ಧರಾಗಿ ಚುನಾವಣೆ ಕೆಲಸ ಮಾಡಿಕೊಂಡು ಹೋಗುವಂತೆ ನನ್ನ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದೇನೆ. ಅದೇ ರೀತಿ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಬಯಸುತ್ತೇನೆ ಎಂದು ತಿಳಿಸಿದರು.

ಒಂದು ವಾರದಲ್ಲಿ ನಾನು ವಾಪಸ್ ಬರುತ್ತೇನೆ.‌ ನಮ್ಮ ಮೂರು ಕ್ಷೇತ್ರಗಳಲ್ಲಿ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳಲ್ಲಿಯೂ ಕೆಲಸ ಮಾಡುವಂತೆ ಕೋರಿದ್ದೇನೆ. ಯಾರೂ ಸಮಯ ವ್ಯರ್ಥ ಮಾಡಬಾರದು. ಆಸ್ಪತ್ರೆಯಿಂದ ಬಂದ ಕೂಡಲೇ ನಾನು ಮಂಡ್ಯದಿಂದ ಸ್ಪರ್ಧೆ ಮಾಡುತ್ತೇನೆಯೋ ಇಲ್ಲವೋ ಎಂಬುದನ್ನು ತಿಳಿಸುತ್ತೇನೆ. ನನ್ನ ಪ್ರಕಾರ ಮಂಡ್ಯ ಸೇರಿ ನಮ್ಮ ಕ್ಷೇತ್ರಗಳಲ್ಲಿ ಕಾರ್ಯಕರ್ತರೇ ಅಭ್ಯರ್ಥಿಗಳು. ಪಕ್ಷವನ್ನು, ಕಾರ್ಯಕರ್ತರನ್ನು ಗೆಲ್ಲಿಸವುದಕಾಗಿ ಎಲ್ಲರೂ ಒಮ್ಮತವಾಗಿ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ನಾನು ಆಸ್ಪತ್ರೆಗೆ ದಾಖಲಾಗುವ ಮುನ್ನ ಇಷ್ಟು ವಿಷಯಗಳನ್ನು ಕಾರ್ಯಕರ್ತರಿಗೆ ಹೇಳಬೇಕಿತ್ತು. ಅದನ್ನು ನಿಮ್ಮ (ಮಾಧ್ಯಮಗಳು) ಮೂಲಕ ಅವರಿಗೆ ಹೇಳುತ್ತಿದ್ದೇನೆ ಎಂದ ಅವರು, ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೋಲಾರ ಕ್ಷೇತ್ರದ ಬಗ್ಗೆ ಗೊಂದಲ ನಿವಾರಣೆ ಆಗಿದೆ. ಆಸ್ಪತ್ರೆಯಿಂದ ಬಂದ ಕೂಡಲೇ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಇದನ್ನೂ ಓದಿ: White Hair: ಬಿಳಿಕೂದಲನ್ನು ಗಾಢ ಕಪ್ಪಾಗಿಸಲು ಹೇಳಿಮಾಡಿಸಿದ್ದು ಈ ನೀರು: ಕೂದಲಿಗೆ ಸ್ಪ್ರೇ ಮಾಡಿದ್ರೆ ಸಾಕು 25 ನಿಮಿಷದಲ್ಲಿ ರಿಸಲ್ಟ್!

ಮಂಡ್ಯ ಜಿಲ್ಲೆಯ ಕಾರ್ಯಕರ್ತರು ನಿರಾಶೆ ಪಡಬೇಕಿಲ್ಲ. ಅವರಿಗೆ ಒಪ್ಪಿಗೆಯಾಗುವ ಒಳ್ಳೆಯ ನಿರ್ಧಾರವನ್ನೇ ಪ್ರಕಟಿಸುತ್ತೇನೆ. ಇಂದಿನಿಂದಲೇ ಎಲ್ಲರೂ ಚುನಾವಣೆ ಕೆಲಸ ಶುರು ಮಾಡಬೇಕು ಎಂದು ಮಂಡ್ಯ ಕಾರ್ಯಕರ್ತರಿಗೆ ಕರೆ ನೀಡಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News