ಬೆಂಗಳೂರು: ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. #ಜನರಿಗೆ_ಬಿಜೆಪಿ_ವಿದ್ಯುತ್_ಬರೆ ಹ್ಯಾಶ್ ಟ್ಯಾಗ್ ಬಳಸಿ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರ್ಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ’ ಎಂದು ಕುಟುಕಿದ್ದಾರೆ.
‘ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರ್ಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ!! ಇದರ ಹಿಂದಿನ ಹುನ್ನಾರ ಏನು? ಮಾಸಿಕ 100 ಯೂನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು. ಅಂದರೆ ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ?’ ಎಂದು ಎಚ್‍ಡಿಕೆ ವ್ಯಂಗ್ಯವಾಡಿದ್ದಾರೆ.
ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ. ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ. 1/7#ಜನರಿಗೆ_ಬಿಜೆಪಿ_ವಿದ್ಯುತ್_ಬರೆ
— H D Kumaraswamy (@hd_kumaraswamy) June 28, 2022
ಇದನ್ನೂ ಓದಿ: ‘ಬಿಜೆಪಿಯವರಿಗೆ ಸ್ವಂತ ಮಕ್ಕಳಿಲ್ಲ, ಅಲ್ಲಿರೋರು ಬಾಡಿಗೆ ಮಕ್ಕಳು’
‘ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ. ಆ ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ. ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ. ಬಲಿಷ್ಟರು, ಬಲ್ಲಿದರ ಆಡಂಬೋಲ. ಬಿಸ್ನೆಸ್ ಕ್ಲಾಸಿನ ಕಾಮಧೇನು. ಬಡವರು & ಮಧ್ಯಮ ವರ್ಗದ ಜನರ ಪಾಲಿಗೆ ರಕ್ತಪಿಪಾಸು’ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಸಿಕ 100 ಯೂನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು. ಅಂದರೆ; ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ? 3/7#ಜನರಿಗೆ_ಬಿಜೆಪಿ_ವಿದ್ಯುತ್_ಬರೆ
— H D Kumaraswamy (@hd_kumaraswamy) June 28, 2022
‘ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ? ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರ್ಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನಕ್ಕೆ ಇಳಿಯಬೇಕಾಗುತ್ತದೆ’ ಎಂದು ಎಚ್‍ಡಿಕೆ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ. ಬಲಿಷ್ಟರು, ಬಲ್ಲಿದರ ಆಡಂಬೋಲ. ಬಿಸ್ನೆಸ್ ಕ್ಲಾಸಿನ ಕಾಮಧೇನು. ಬಡವರು & ಮಧ್ಯಮ ವರ್ಗದ ಜನರ ಪಾಲಿಗೆ ರಕ್ತಪಿಪಾಸು. 5/7#ಜನರಿಗೆ_ಬಿಜೆಪಿ_ವಿದ್ಯುತ್_ಬರೆ
— H D Kumaraswamy (@hd_kumaraswamy) June 28, 2022
ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ. 7/7#ಜನರಿಗೆ_ಬಿಜೆಪಿ_ವಿದ್ಯುತ್_ಬರೆ
— H D Kumaraswamy (@hd_kumaraswamy) June 28, 2022
ಇದನ್ನೂ ಓದಿ: ಸಿದ್ದರಾಮಯ್ಯಗೆ ಕಾಂಗ್ರೆಸ್ ಪಕ್ಷದಲ್ಲಿ ಏಕಾಂಗಿತನ ಕಾಡುತ್ತಿದೆ: ಬಿಜೆಪಿ ವ್ಯಂಗ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ