ಡೂಪ್ಲಿಕೇಟ್‌ ಸಿಎಂ ಬಹಳ ಆವೇಶದಲ್ಲಿದ್ದಾರೆ: ಸಿದ್ದರಾಮಯ್ಯ ವಿರುದ್ಧ ಎಚ್‍ಡಿಕೆ ಆಕ್ರೋಶ!

ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ ಎಂದು ಎಚ್‍ಡಿಕೆ ಸವಾಲು ಹಾಕಿದ್ದಾರೆ.

Written by - Puttaraj K Alur | Last Updated : Nov 13, 2023, 09:54 PM IST
  • ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ!
  • ಎಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ
  • ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ ಎಂದ ಎಚ್‍ಡಿಕೆ
ಡೂಪ್ಲಿಕೇಟ್‌ ಸಿಎಂ ಬಹಳ ಆವೇಶದಲ್ಲಿದ್ದಾರೆ: ಸಿದ್ದರಾಮಯ್ಯ ವಿರುದ್ಧ ಎಚ್‍ಡಿಕೆ ಆಕ್ರೋಶ! title=
ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಆಕ್ರೋಶ!

ಬೆಂಗಳೂರು: ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ ಅಂತಾ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ‘ಕುಮಾರಸ್ವಾಮಿಯವರೇ ರಾಜ್ಯದ ಬಡವರ ಮೇಲೆ ಈ ಪರಿಯ ದ್ವೇಷವೇಕೆ?’ ಎಂದು ಪ್ರಶ್ನಿಸಿದ್ದ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದ್ದಾರೆ.

ಎಚ್.ಡಿ.ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ? ಎಂಬ ಆಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮಿದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ. ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್‌ ಅಲ್ಲ. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಇರುತ್ತವೆ. ಇದು ಗೊತ್ತಿಲ್ಲದಷ್ಟು ಅಜ್ಞಾನವೇ? ಪ್ರಶ್ನೆ ಮಾಡಬೇಕು ಎಂತಲೇ ಜನ ನನ್ನನ್ನು ವಿರೋಧಪಕ್ಷದಲ್ಲಿ ಕೂರಿಸಿದ್ದಾರೆ. ಇವರನ್ನು ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ತಲೆ ನಿಲ್ಲುತ್ತಿಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ. ಸ್ವಲ್ಪ ಸಮಯ ಬೇಕಷ್ಟೇ, ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ’ ಎಂದು ಎಚ್‍ಡಿಕೆ ಟೀಕಿಸಿದ್ದಾರೆ.

ಇದನ್ನೂ ಓದಿ: ಹೈಕಮಾಂಡ್’ಗೆ ಜ್ಞಾನೋದಯ ಆಗಿ ವಿಜಯೇಂದ್ರಗೆ ಸ್ಥಾನ ನೀಡಲಾಗಿದೆ: ಕೆ ಎನ್ ರಾಜಣ್ಣ

‘ಪಂಚರತ್ನಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾನು ರೂಪಿಸಿದ್ದ ಪಂಚಸೂತ್ರಗಳು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ಶಾಶ್ವತ ʼಆರ್ಥಿಕವೈಕಲ್ಯʼರನ್ನಾಗಿಸುವ ತಾತ್ಕಾಲಿಕ ತಂತ್ರಗಳಷ್ಟೇ. 75 ವರ್ಷಗಳಿಂದಲೂ ಇದನ್ನೇ ಮಾಡಿದೆ. ಜನರ ಕೈಲಿ ಭಿಕ್ಷಾಪಾತ್ರೆ ಇದ್ದರೆ, ವೋಟಿನ ಜೋಳಿಗೆ ಭರ್ತಿ ಆಗುತ್ತದೆ ಎನ್ನುವ ದುಷ್ಟಬುದ್ಧಿ ಇವರದ್ದು. ಜನರು ಸ್ವಾವಲಂಭಿಗಳಾಗಿ ಗೌರವಯುತ ಜೀವನ ನಡೆಸಬೇಕು ಎನ್ನುವ ಹಂಬಲ ನನ್ನದಾಗಿತ್ತು. ಡೂಪ್ಲಿಕೇಟ್‌ ಸಿಎಂ ಸಹೋದ್ಯೋಗಿ ಸಚಿವರೊಬ್ಬರೇ ಹೇಳಿದ್ದರಲ್ಲ; “ಎಲೆಕ್ಷನ್‌ ಗೆಲ್ಲಬೇಕಾದರೆ ಗ್ಯಾರಂಟಿಗಳಂತಹ ಚೀಫ್‌ ಗಿಮಿಕ್‌ ಮಾಡಲೇಬೇಕು” ಎಂದು. ಗ್ಯಾರಂಟಿಗಳು ಚೀಫ್‌ ಗಿಮಿಕ್‌ ಎನ್ನುವ ಆ ಸಚಿವರ ಮಾತಿಗೆ ನನ್ನ ಸಹಮತವಿದೆ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಗಿಲೀಟುಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣಂತೆ’ ಎಂದು ಸಿದ್ದರಾಮಯ್ಯಗೆ ಎಚ್‍ಡಿಕೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಸಚಿನ ಆರ್ ಬಿ ತಿಮ್ಮಾಪುರ ಹೇಳಿಕೆ

‘ಕೋಟಿ ರೂಪಾಯಿ ಕೊಟ್ಟು ಗ್ಯಾರಂಟಿ ಸ್ಕೀಮುಗಳ ಬಗ್ಗೆ ಸಮೀಕ್ಷೆ ಮಾಡಿಸಿಕೊಂಡರಲ್ಲ, ಚನ್ನಪಟ್ಟಣದ ಜನರು ಏನು ಹೇಳಿದ್ದಾರೆಯೇ ಎಂಬ ಮಾಹಿತಿ ಅದರಲ್ಲಿ ಇದೆಯಾ? ಕೂಸು ಹುಟ್ಟುವ ಮುನ್ನವೇ ಕುಲಾವಿಯೇ? ಗ್ಯಾರಂಟಿ ಜಾರಿಗೆ ಮೊದಲೇ ಸಮೀಕ್ಷೆ ಪ್ಲ್ಯಾನ್‌ ಮಾಡಿಕೊಂಡಿದ್ದರಲ್ಲ, ಯಾಕೆ? ನಿಮ್ಮ ಯೋಗ್ಯತೆಗೆ ಇನ್ನು ‘ಯುವನಿಧಿʼ ಬಂದೇ ಇಲ್ಲ. ಅದು ಬರುತ್ತೋ ಇಲ್ಲವೋ ಗೊತ್ತಿಲ್ಲ. ಅದನ್ನು ಚನ್ನಪಟ್ಟಣದ ಜನರನ್ನೇ ಕೇಳಬೇಕೆ?’ ಎಂದು ಪ್ರಶ್ನಿಸಿದ್ದಾರೆ.

‘ಇವರ ರಾಜಕೀಯ ಸ್ವಾರ್ಥಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳನ್ನು ಬಲಿಗೊಟ್ಟು, ‘ರಾಮನಗರʼ ಹೆಸರಿಗೇ ಕೊಕ್‌ ಕೊಡಲು ಹೊರಟಿದ್ದಾರೆ. ಆಯ್ಯೋ ದೇವೆರೇ, ಕಾಂಗ್ರೆಸ್ ಸರ್ಕಾರದಲ್ಲಿ ರಾಮನ ಹೆಸರಿಗೂ ಗ್ಯಾರಂಟಿ ಇಲ್ಲ’ವೆಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News