ಆಣೆಕಟ್ಟು ನಾವು ಕಟ್ಟಿ, 200 ವರ್ಷಗಳಿಂದ ಅವರ ದಬ್ಬಾಳಿಕೆ ಸಹಿಸಿಕೊಂದಿದ್ದೇವೆ : ಹೆಚ್‌ಡಿಕೆ

ಇಲ್ಲಿ ನಾವು ಅಣೆಕಟ್ಟು ಕಟ್ಟಿದ್ದೇವೆ. ನಮ್ಮ ಜನರ ಹಣದಲ್ಲಿ ಅಣೆಕಟ್ಟು ನಿರ್ಮಾಣ ಮಾಡಿದ್ದೇವೆ. ಕೇಂದ್ರ ಸರಕಾರವೇನೂ ನಮಗೇನೂ ಇದಕ್ಕೆ ಹಣ ಕೊಟ್ಟಿಲ್ಲ. ಅದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅಣೆಕಟ್ಟು ಇರುವುದು ನಮ್ಮಲ್ಲಿ, ಅದನ್ನು ಕಟ್ಟಿದ್ದು ನಾವು. 200 ವರ್ಷಗಳಿಂದ ಅವರ ದಬ್ಬಾಳಿಕೆ ಸಹಿಸಿಕೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದರು.

Written by - Prashobh Devanahalli | Edited by - Krishna N K | Last Updated : Sep 19, 2023, 05:50 PM IST
  • ಆಣೆಕಟ್ಟು ನಾವು ಕಟ್ಟಿ, 200 ವರ್ಷಗಳಿಂದ ಅವರ ದಬ್ಬಾಳಿಕೆ ಸಹಿಸಿಕೊಂದಿದ್ದೇವೆ.
  • ಅಂತಿಮವಾಗಿ ನಾವು ಕೂಡ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ.
  • ಕಾವೇರಿ ನೀರು ಹಂಚಿಕೆ ವಿವಾದ ಕುರಿತು ಮಾಜಿ ಸಿಎಂ ಹೆಚ್‌ಡಿಕೆ ಗರಂ
ಆಣೆಕಟ್ಟು ನಾವು ಕಟ್ಟಿ, 200 ವರ್ಷಗಳಿಂದ ಅವರ ದಬ್ಬಾಳಿಕೆ ಸಹಿಸಿಕೊಂದಿದ್ದೇವೆ : ಹೆಚ್‌ಡಿಕೆ title=

ರಾಮನಗರ : ಪ್ರಾಧಿಕಾರ ನೀರು ಬಿಡಿ ಎಂದು ಸೂಚನೆ ನೀಡಿದಾಕ್ಷಣ ರಾಜ್ಯ ಸರಕಾರವು ತಡಮಾಡದೆ ಸುಪ್ರೀಂ ಕೋರ್ಟಿಗೆ ತುರ್ತು ಅರ್ಜಿ ಸಲ್ಲಿಸಬೇಕಿತ್ತು. ಅದು ಬಿಟ್ಟು ತಮಿಳುನಾಡಿಗೆ ನೀರು ಬಿಡುವ ಆತುರ ತೂರಿದ್ದೇಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಬಿಡದಿಯ ತಮ್ಮ ತೋಟದ ಮನೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದರು ಅವರು, ಇಲ್ಲಿ ನಾವು ಅಣೆಕಟ್ಟು ಕಟ್ಟಿದ್ದೇವೆ. ನಮ್ಮ ಜನರ ಹಣದಲ್ಲಿ ಅಣೆಕಟ್ಟು ನಿರ್ಮಾಣ ಮಾಡಿದ್ದೇವೆ. ಕೇಂದ್ರ ಸರಕಾರವೇನೂ ನಮಗೇನೂ ಇದಕ್ಕೆ ಹಣ ಕೊಟ್ಟಿಲ್ಲ. ಅದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅಣೆಕಟ್ಟು ಇರುವುದು ನಮ್ಮಲ್ಲಿ, ಅದನ್ನು ಕಟ್ಟಿದ್ದು ನಾವು. 200 ವರ್ಷಗಳಿಂದ ಅವರ ದಬ್ಬಾಳಿಕೆ ಸಹಿಸಿಕೊಂದಿದ್ದೇವೆ. ಇದನ್ನು ಒಕ್ಕೂಟ ವ್ಯವಸ್ಥೆ ಎಂದು ಕರೆಯಬೇಕಾ? ಎಂದು ಕಿಡಿಕಾರಿದರು ಮಾಜಿ ಮುಖ್ಯಮಂತ್ರಿಗಳು.

ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಸಿಟಿ ರವಿ ಮೌನದಲ್ಲಿ ಹೆಚ್ಚಿನ ನಿಗೂಢತೆ ಇದೆಯೇ?- ಕಾಂಗ್ರೆಸ್

ಅಂತಿಮವಾಗಿ ನಾವು ಕೂಡ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಎಷ್ಟು ವರ್ಷ ಈ ದಬ್ಬಾಳಿಕೆ ಸಹಿಸಲು ಸಾಧ್ಯ? ಆದೇಶ ಧಿಕ್ಕರಿಸಿದರೆ ಜೈಲಿಗೆ ಹಾಕ್ತಾರಾ? ಹಾಕಲಿ ಬಿಡಿ.. ಅರೆಸೇನಾ ಪಡೆಯನ್ನು ಕರೆಸುತ್ತಾರ? ಕರೆಸಲಿ ನೋಡೋಣ. ಹೀಗೆ ನಿರಂತರವಾಗಿ ದಬ್ಬಾಳಿಕೆ ನಡೆಸುತ್ತಿದ್ದರೆ ಸಹಿಸಲು ಸಾಧ್ಯವೇ? ಇದು ಯಾವ ಸೀಮೆ  ಒಕ್ಕೂಟದ ವ್ಯವಸ್ಥೆ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಪಕ್ಷಭೇದ ಮರೆತು ಒಗ್ಗೂಡಿ ಹೋರಾಟ ಮಾಡಲೇಬೇಕಿದೆ. ತಮಿಳುನಾಡಿನಲ್ಲಿ ಯಾವ ರೀತಿ ಎಲ್ಲರೂ ಇಂಥ ಸಂದರ್ಭಗಳಲ್ಲಿ ಒಗ್ಗೂಡುತ್ತಾರೆ? ಹಾಗೆಯೇ ನಾವೂ ಒಗ್ಗೂಡಬೇಕು. ಆದರೆ, ರಾಜಕೀಯ ಅಂತ ನಾವಿಲ್ಲಿ ಹೊಡೆದಾಡಿಕೊಂಡು ಕೂತಿದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಚೈತ್ರ ಅಂಡ್ ಗ್ಯಾಂಗ್ ನಿಂದ ಉದ್ಯಮಿ ವಂಚನೆ ಪ್ರಕರಣ: ಆರೋಪಿ ಅಭಿನವ ಹಾಲಶ್ರೀ ಬಂಧನ

ನಾನು ದೆಹಲಿಗೆ ಹೋದಾಗ ಈ ಬಗ್ಗೆ ಮಾತನಾಡುತ್ತೇನೆ. ಮೈತ್ರಿ ಮಾಡಿಕೊಳ್ತಾ ಇದೀವಿ ಅನ್ನುವ ಕಾರಣಕ್ಕೆ ಇದರ ಬಗ್ಗೆ ಮಾತಾಡಲು ಹಿಂದೆಮುಂದೆ ನೋಡುವುದಿಲ್ಲ. ಮೈತ್ರಿ ಬಗ್ಗೆ ಮಾತಾಡುವ ಸಂದರ್ಭದಲ್ಲಿ ಈ ವಿಚಾರದ ಬಗ್ಗೆ ಕೂಡ ಚರ್ಚೆ ನಡೆಸುತ್ತೇನೆ. ರಾಜ್ಯದ ಹಿತವನ್ನು ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡುವುದಿಲ್ಲ. ಹಾಗೆಯೇ, ಬಿಜೆಪಿಯವರು ಧೈರ್ಯದಿಂದ ಮೋದಿ ಅವರ ಬಳಿ ಹೋಗಿ ಮಾತಾಡಲಿ. ನಾನೂ ಪ್ರಾಮಾಣಿಕವಾಗಿ ಸಲಹೆ ಕೊಡುತ್ತೇನೆ.

ಅಗಸ್ಟ್ 10ರಂದು ಕಾವೇರಿ ಜಲ ನಿಯಂತ್ರಣ ಸಭೆ, ಅಗಸ್ಟ್ 11ರಂದು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು. ಅತ್ತ ನೀರು ಬಿಡಲು ಕರ್ನಾಟಕಕ್ಕೆ ಪ್ರಾಧಿಕಾರ ಸೂಚನೆ ನೀಡಿದ ಮರುದಿನವೇ ತಮಿಳುನಾಡು ರಾಜ್ಯವು ತುರ್ತಾಗಿ ಸುಪ್ರೀಂ ಕೋರ್ಟಿಗೆ ಹೋಗಬೇಕಿತ್ತು. ಹಾಗೆ ಮಾಡಲಿಲ್ಲ, ರಾಜ್ಯ ಸರಕಾರ ವಿನಾಕಾರಣ ಕಾಲಹರಣ ಮಾಡಿತು ಎಂದು ಅವರು ನೇರ ಆರೋಪ ಮಾಡಿದರು.

ಇದನ್ನೂ ಓದಿ:

ಸೋಮವಾರದಂದು ಮುಂದಿನ 15 ದಿನ ನೆರೆರಾಜ್ಯಕ್ಕೆ ನಿತ್ಯವೂ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಹೇಳಿದ ಕೂಡಲೇ ರಾಜ್ಯ ಸರಕಾರ ಒಂದು ತುರ್ತು ಅರ್ಜಿಯನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಬೇಕಿತ್ತು. ಮಧ್ಯರಾತ್ರಿ ಆದರೂ ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕಿತ್ತು. ಎಷ್ಟೋ ಸಂದರ್ಭದಲ್ಲಿ ಮಧ್ಯರಾತ್ರಿ ಸಮಯದಲ್ಲಿಯೂ ಸುಪ್ರೀಂ ಕೋರ್ಟ್ ಕಲಾಪ ನಡೆದಿದೆ. ರಾಜ್ಯ ಸರಕಾರ ಈ ವಿಷಯದಲ್ಲಿ ಪೂರ್ಣ ವಿಫಲವಾಗಿದೆ. ಸರಕಾರಕ್ಕೆ ಕಾನೂನು ತಜ್ಞರು ಸಲಹೆ ಕೊಡಲಿಲ್ಲವಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ದೇವೇಗೌಡರು ಮಾತಾಡಿದ್ದು ಎಲ್ಲ ಗಮನಿಸಿದ್ದೀರಿ. ಆಗ ರಾಜ್ಯದವರೇ ಆಗಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಎಲ್ಲಿ ಹೋಗಿದ್ದರು? ದೇವೇಗೌಡರು ಇಂಥಾ ಇಳಿ ವಯಸ್ಸಿನಲ್ಲಿಯೂ ಹೋರಾಟ ನಡೆಸುತ್ತಿದ್ದಾರೆ. ಇವರಿಗೆ ಏನಾಗಿದೆ? ತಮಿಳುನಾಡಿನವರು ಈ ವಿಚಾರ ಪ್ರಸ್ತಾಪ ಮಾಡಿದಾಗ ಮಲ್ಲಿಕಾರ್ಜುನ ಖರ್ಗೆಯವರು ಯಾಕೆ ಮಾತಾಡಲಿಲ್ಲ ಎಂದು ಕುಮಾರಸ್ವಾಮಿ ಅವರು ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News