ಬೆಂಗಳೂರು: ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಓರ್ವ ಅಧಿಕಾರಿಯನ್ನು ಏಳು ಬಾರಿ ವರ್ಗಾವಣೆ ಮಾಡಲಾಗಿತ್ತು ಎಂದು ಸಚಿವ ಚೆಲುವರಾಯ ಸ್ವಾಮಿ ಆರೋಪ ಮಾಡಿದರು.
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ವರ್ಗಾವಣೆ ದಂಧೆಯ ದಾಖಲೆಗಳನ್ನು ಸಿಎಂ ಹಾಗೂ ಸ್ಪೀಕರ್ ಗೆ ನೀಡಲಾಗಿದೆ ಎಂಬ ವಿಚಾರವಾಗಿ ಕುಮಾರಸ್ವಾಮಿ ಮಾತನಾಡಿದ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಚೆಲುವರಾಯಸ್ವಾಮಿ,ನಾವು ರೇಟ್ ಕಾರ್ಡ್ ತೀರ್ಮಾನ ಮಾಡಿಲ್ಲ.ಜನರ ಸಮಸ್ಯೆಗಳ ಬಗ್ಗೆ ನಾವು ಗಮನ ಹರಿಸುತ್ತಿದ್ದೇವೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ವರ್ಗಾವಣೆ ದಂದೆಯ ಪಟ್ಟಿ ಮಾಧ್ಯಮಗಳಲ್ಲಿ ಬಿಡುಗಡೆ ಆಗಿತ್ತು ಎಂದು ದಾಖಲೆ ತೋರಿಸಿದರು.
ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ವಿಜಯ ಕುಮಾರ್ ಎಂಬ ಐಎಎಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವಾಗ ಕುಮಾರಸ್ವಾಮಿ ಸಿಎಂ ಆಗಿದ್ದರು ಎಂದು ಹೇಳಿದರು.
ಇದನ್ನೂ ಓದಿ: ಚೀನಾ ಲೋನ್ ಆ್ಯಪ್‌ನವರ ಕಿರುಕುಳ: ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ!
ದಾಖಲೆ ಇದ್ದರೆ ಸಿಎಂ ಹಾಗೂ ಸ್ಪೀಕರ್ ಗೆ ಕೊಡಿ. ಎಚ್ ಡಿ ಕೆ ಸಿಎಂ ಆಗಿದ್ದಾಗ ಕೆಎಎಸ್ ಅಧಿಕಾರಿಯೊಬ್ಬರನ್ನು ಒಂದು ವರ್ಷದಲ್ಲಿ ಏಳು ಬಾರಿ ವರ್ಗಾವಣೆ ಮಾಡಲಾಗಿದೆ ಎಂದರು.
ನನ್ನ ಕಾಲದಲ್ಲಿ ರೇಟ್ ಫಿಕ್ಸ್ ಆಗಿತ್ತು ಎಂಬ ಆರೋಪಕ್ಕೆ ಎಚ್ ಡಿ ಕೆ ಪ್ರತಿಕ್ರಿಯೆ ನೀಡಿ, ಪ್ರಮುಖ ಖಾತೆಗಳನ್ನು ನಿರ್ವಹಣೆ ಮಾಡಿದ್ದು ಕಾಂಗ್ರೆಸ್ ನವರೇ, ಯಾವುದೇ ಇಲಾಖೆಯಲ್ಲಿ ವರ್ಗಾವಣೆ ಮಾಡಿವ ಸ್ವಾತಂತ್ರ್ಯ ನನಗೆ ಇರಲಿಲ್ಲ. ಏಳು ಬಾರಿ ವರ್ಗಾವಣೆ ಮಾಡಿರುವ ಬಗ್ಗೆ ನನಗೇ ಮಾಹಿತಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ: ಪೌರ ಕಾರ್ಮಿಕರನ್ನು ಖಾಯಂಗೊಳಸಿ -ಪೌರಕಾರ್ಮಿಕರ ಮಹಾ ಸಂಘ ಆಗ್ರಹ
ಐಎಂಎ ಪ್ರಕರಣದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿದ್ದಕ್ಕೆ ನಾನು ಹೊಣೆಗಾರನೇ? ಯಾವುದೇ ವರ್ಗಾವಣೆಯಲ್ಲಿ ನಾನು ಹಣ ಪಡೆದಿದ್ದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದರು.
ಇನ್ನು ಇದೇ ಸಂದರ್ಭದಲ್ಲಿ ಎಚ್ ಡಿ ರೇವಣ್ಣ ಮಾತನಾಡಿ, ನಾನು ಸಿದ್ದರಾಮಯ್ಯ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪ ಮಾಡಲು ನಾನು ತಯಾರಿಲ್ಲ ಎಂದು ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದ್ದು ಗಮನ ಸೆಳೆಯಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.