HD Revanna: ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಆರೋಪದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿದೆ. ಅಷ್ಟೇ ಅಲ್ಲದೆ, ಮೇ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.
ಇದನ್ನೂ ಓದಿ: ವೀಳ್ಯದೆಲೆ ಕೂದಲಿಗೆ ಅಮೃತವಿದ್ದಂತೆ… ಹೀಗೆ ಬಳಸಿದರೆ ಕೂದಲು ದಪ್ಪ-ಸಮೃದ್ಧವಾಗಿ ಸೊಂಟದವರೆಗೆ ಬೆಳೆಯುತ್ತೆ!
ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮೇ 5 ರಂದು ಎಸ್ಐಟಿ ಅವರನ್ನು ಬಂಧಿಸಿತ್ತು.
ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗುವ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನ ಎಸ್ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಹೊಟ್ಟೆ ನೋವು ಹಾಗೂ ಗಾಸ್ಟ್ರಿಕ್ ಹಿನ್ನೆಲೆಯಲ್ಲಿ ನಿನ್ನೆ ಬೌರಿಂಗ್ ಆಸ್ಪತ್ರೆಗೆ ರೇವಣ್ಣ ಅವರನ್ನ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ವಿಕ್ಟೋರಿಯಾ ಆಸ್ಪತ್ರೆಗೆ ಶಿಫಾರಸ್ಸು ಮಾಡಿದ್ದರಿಂದ ಅಧಿಕಾರಿಗಳು ಅಲ್ಲಿಗೆ ಶಿಫ್ಸ್ ಮಾಡಿದ್ದರು.
ಜಾಮೀನು ಕೋರಿ ರೇವಣ್ಣ ಪರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಇಂದು ಮಧ್ಯಾಹ್ನ 2.45ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೂಡಿತ್ತು. ನಂತರ,ವಿಚಾರಣೆ ಬಳಿಕ ರೇವಣ್ಣ ಅವರನ್ನ 14 ದಿನ ನ್ಯಾಯಾಂಗ ಬಂಧನ ಎಂದು ಆದೇಶ ನೀಡಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್