ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ!ಈ ಪ್ರದೇಶಗಳಲ್ಲಿ ಪ್ರವಾಹ ಭೀತಿ

Karnataka Rain Alert:ಟ್ರಫ್ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

Written by - Ranjitha R K | Last Updated : Jul 9, 2024, 09:18 AM IST
  • ಏಳು ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ
  • ಬೀಸಲಿದೆ ಜೋರು ಗಾಳಿ, ಸುರಿಯಲಿದೆ ಭಾರೀ ಮಳೆ
  • ೪ ಜಿಲ್ಲೆಗಳಿಗೆ ರೆಡ್ ಅಲರ್ಟ್
ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ!ಈ ಪ್ರದೇಶಗಳಲ್ಲಿ ಪ್ರವಾಹ ಭೀತಿ  title=

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.ಮುಂದಿನ 7 ದಿನಗಳವರೆಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. 

ಕೇರಳ ಕರಾವಳಿವರೆಗೆ ಟ್ರಫ್ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಭಾರೀ ಗಾಳಿ ಸಹಿತ ಮಳೆಯಾಗಲಿದೆ. ಮೀನುಗರಾರಿಗೆ ಸಮುದ್ರಕ್ಕೆ ತೆರಳದಂತೆ  ಸೂಚನೆ ನೀಡಲಾಗಿದೆ. ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ  ಹೇಳಲಾಗಿದೆ. 

ಇದನ್ನೂ ಓದಿ : ವರದಿ ಕೇಳಿದ್ದೇವೆ, ವರದಿ ಬಂದ ಬಳಿಕ ಮುಂದಿನ ಕ್ರಮ- ಡಿಕೆಶಿ

ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ನಾಳೆಯಿಂದ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 

ಬೀದರ್,ಕಲಬುರ್ಗಿ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ  ಕೂಡಾ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡು, ಬಾಗಲಕೋಟೆ, ಬೆಳಗಾವಿ, ಬೀದರ್ ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. 

 ಇನ್ನು ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರಕ್ಕೆ  4 ದಿನಗಳ ಕಾಲ ಯೆಲ್ಲೋ ಅಲರ್ಟ್ ನೀಡಲಾಗಿದೆ.  

ಇದನ್ನೂ ಓದಿ : ಸಿಎಂ, ಡಿಸಿಎಂ ಬಗ್ಗೆ ಯಾರು ಮಾತನಾಡಬಾರದು: ಸಚಿವ ಕೆ.ಎನ್.ರಾಜಣ್ಣ

ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆ ಸಾಧ್ಯತೆ ಇದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದೆ. 

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News