ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ! ಎರಡು ದಿನಗಳವರೆಗೆ ಆರ್ಭಟಿಸಲಿದ್ದಾನೆ ವರುಣ

ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಬಿಪೊರ್‌ಜೊಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡು ಮುನ್ನುಗ್ಗುತ್ತಿದೆ. ಚಂಡಮಾರುತದ ಪರಿಣಾಮ ರಾಜ್ಯದ ಮೇಲೆ ಕೂಡಾ ಕಂಡು ಬರಲಿದೆ.

Written by - Ranjitha R K | Last Updated : Jun 10, 2023, 08:28 AM IST
  • ತೀವ್ರ ಸ್ವರೂಪ ಪಡೆದುಕೊಂಡ ಬಿಪೊರ್‌ಜೊಯ್ ಚಂಡಮಾರುತ
  • ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ
  • ರಾಜ್ಯದಲ್ಲಿ ಎರಡು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ
ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ! ಎರಡು ದಿನಗಳವರೆಗೆ ಆರ್ಭಟಿಸಲಿದ್ದಾನೆ ವರುಣ title=

ಬೆಂಗಳೂರು : ಬಿಪೊರ್‌ಜೊಯ್ ಚಂಡಮಾರುತ ಅರಬ್ಬೀ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಿಪೊರ್‌ಜೊಯ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. 

ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಬಿಪೊರ್‌ಜೊಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡು ಮುನ್ನುಗ್ಗುತ್ತಿದೆ. ಚಂಡಮಾರುತದ ಪರಿಣಾಮ ರಾಜ್ಯದ ಮೇಲೆ ಕೂಡಾ ಕಂಡು ಬರಲಿದೆ. ಇನ್ನೆರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿ ರಾಜ್ಯದ ವಿವಿಧ ಭಾಗದಲ್ಲಿ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ. 

ಇದನ್ನೂ ಓದಿ : ಒಂದು ದಿನದ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ ! ರೂಟ್ ನಂ.43ರಲ್ಲಿ ಟಿಕೆಟ್ ಹರಿಯಲಿರುವ ಮುಖ್ಯಮಂತ್ರಿ

ಸಂಜೆ ಬಳಿಕ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಈ ಭಾಗದಲ್ಲಿ ಕೂಡಾ ಗುಡುಗು ಮಿಂಚು ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಮುದ್ರದಲ್ಲಿ ಗಾಳಿಯ ವೇಗವು ಘಂಟೆಗೆ 30-40 ಕಿಮೀ ತಲುಪಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರು ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಆಗಿದ್ದು,  ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 

ಇದನ್ನೂ ಓದಿ : ಪ್ಲಾಸ್ಟಿಕ್ ತಯಾರಿಕಾ ಕಂಪನಿಗಳ ಮೇಲೆ ದಾಳಿ, 11 ಟನ್‌ ನಿಷೇಧಿತ ಪ್ಲಾಸ್ಟಿಕ್ ವಶ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News