Karnataka Heavy Rain : ಜುಲೈ 17 ರವರೆಗೂ ರಾಜ್ಯಾದ್ಯಂತ ಭಾರಿ ಮಳೆ : ಹವಾಮಾನ ಇಲಾಖೆ

ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. 

Written by - Channabasava A Kashinakunti | Last Updated : Jul 13, 2022, 06:10 PM IST
  • ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ ಮುಂದುವರೆದಿದ್ದು
  • ರಾಜ್ಯಾದ್ಯಂತ ಜುಲೈ 17 ರವರೆಗೂ ಭಾರಿ ಮಳೆ
  • ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Karnataka Heavy Rain : ಜುಲೈ 17 ರವರೆಗೂ ರಾಜ್ಯಾದ್ಯಂತ ಭಾರಿ ಮಳೆ : ಹವಾಮಾನ ಇಲಾಖೆ title=

ಬೆಂಗಳೂರು : ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ ಮುಂದುವರೆದಿದ್ದು, ರಾಜ್ಯಾದ್ಯಂತ ಜುಲೈ 17 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. 

ಇದನ್ನೂ ಓದಿ : Priyank Kharge : ವಿಧಾನ ಸೌಧ ವ್ಯಾಪಾರ ಸೌಧ ಆಗಿದೆ : ಪ್ರಿಯಾಂಕ್ ಖರ್ಗೆ

ಉತ್ತರ ಒಳನಾಡಿನ ಬೆಳಗಾವಿ, ಕಲಬುರ್ಗಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆ ಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೆ, ಬೀದರ್, ವಿಜಯಪುರ, ಹಾಸನ ಜಿಲ್ಲೆಗಳ ಕೆಲವೆಡೆ ಭಾರೀ ಮಳೆ ಸಾಧ್ಯತೆ. 

ಕರಾವಳಿ ಜಿಲ್ಲೆಯ ಮೀನುಗಾರರಿಗೆ ಮುಂದಿನ 48 ಗಂಟೆ ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಬಿರುಗಾಳಿ ವೇಗ ಗಂಟೆಗೆ 45-55 ಕಿಮೀ ಇದ್ದು, 65 ಕಿ.ಮೀ ತಲುಪುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಮುಂದಿನ 2 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಇದನ್ನೂ ಓದಿ : Lakshmi Hebbalkar : ಬಿಎಸ್​ವೈ ಭೇಟಿಯಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News