ಬೆಂಗಳೂರಲ್ಲಿ ವರುಣನ ಆರ್ಭಟ: ರಾಜ್ಯದಲ್ಲಿ ಇನ್ನೂ 'ನಾಲ್ಕು ದಿನ' ಭಾರಿ ಮಳೆ..!

ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ

Last Updated : Nov 16, 2020, 09:12 PM IST
  • ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ
  • ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ
  • ಮಳೆಯಿಂದಾಗಿ ದೀಪಾವಳಿ ಸಂಭ್ರಮಕ್ಕೆ ಅಡ್ಡಿ
ಬೆಂಗಳೂರಲ್ಲಿ ವರುಣನ ಆರ್ಭಟ: ರಾಜ್ಯದಲ್ಲಿ ಇನ್ನೂ 'ನಾಲ್ಕು ದಿನ' ಭಾರಿ ಮಳೆ..! title=

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಬೆಂಗಳೂರಿನಲ್ಲಿ ಇಂದು ಮಳೆಯಾಗಿದೆ. ನಗರದ ಕುಮಾರಸ್ವಾಮಿ ಲೇಔಟ್, ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಸಾಧಾರಣ ಮಳೆಯಾಗಿದೆ.

ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ(Heavy Rain) ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರತಾಪ್ ಸಿಂಹ ಹೇಳಿಕೆಗೆ ‘ತಿರುಗೇಟು’ ನೀಡಿದ ಸುಮಲತಾ: ಏನಂತ ಗೊತ್ತಾ?

ಬೆಂಗಳೂರಿನಲ್ಲಿ ಮಳೆ ಮುಂದುವರೆದಿದ್ದು, ಸಂಜೆಯಾಗುತ್ತಿದ್ದಂತೆ ಮಳೆ ಧಾರಾಕಾರವಾಗ ಸುರಿಯಲಾರಂಭಿಸಿದೆ. ಮಳೆಯಿಂದಾಗಿ ದೀಪಾವಳಿ ಸಂಭ್ರಮಕ್ಕೆ ಅಡ್ಡಿಯುಂಟಾಗಿದೆ. ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 17 ಮತ್ತು 18 ರಂದು ಮಳೆ ಪ್ರಮಾಣ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ.

ಸಂಪುಟ ವಿಸ್ತರಣೆಯೋ - ಪುನರ್ ರಚನೆಯೋ: ಬುಧವಾರ ದೆಹಲಿಗೆ ಸಿಎಂ

Trending News