ಮಂಗಳೂರು: ರಾಜ್ಯದ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಮತ್ತೆ ಮುಂಗಾರು ಅಬ್ಬರಿಸುತ್ತಿದ್ದು, ಇನ್ನೂ ಎರಡು-ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭದ್ರಾ ಜಲಾಶಯದಿಂದ 16 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಲಿಂಗನಮಕ್ಕಿ ಜಲಾಶಯದ ಒಳಹರಿವು 40 ಸಾವಿರ ಕ್ಯೂಸೆಕ್ಗೆ ಏರಿಕೆಯಾಗಿದೆ.
ಮೂರು ಜಿಲ್ಲೆಗಳ ನದಿಗಳು ಬಹುತೇಕ ತುಂಬಿ ಹರಿಯುತ್ತಿದೆ.ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ನದಿ ಪಾತ್ರದ ಜನರನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು ನದಿ ನೀರಿನ ಮಟ್ಟದ ಕುರಿತು ಆಡಳಿತ ವರ್ಗ ಕಟ್ಟೆಚ್ಚರ ವಹಿಸಿದೆ.