ಮಂಗಳೂರು : ಕಡಲನಗರಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಸಾವನ್ನಪ್ಪುವವರ ಸಂಖ್ಯೆ ಕೂಡಾ ಹೆಚ್ಚುತ್ತಿದೆ. ನಿನ್ನೆ ಒಂದೇ ಕುಟುಂಬದ ನಾಲ್ವರನ್ನು ಮಳೆ ಬಲಿ ಪಡೆದರೆ ಇಂದು ಎರಡು ಜೀವವನ್ನು ಮಳೆ ಬಲಿ ಪಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆರಾಯನ ಅಬ್ಬರ ಜೋರಾಗಿದೆ.ನಿನ್ನೆ ಕುತ್ತಾರ್ ಮದನಿನಗರದಲ್ಲಿ ಮನೆ ಮೇಲೆ ಕಾಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ಇದೇ ಬೆನ್ನಲ್ಲೇ ನಿನ್ನೆ ರಾತ್ರಿ ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಮಂಗಳೂರು ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.
ಇದನ್ನೂ ಓದಿ : ಮಾಧ್ಯಮಗಳ ಮುಂದೆ ಮಾತನಾಡುವವರು, ಹೈಕಮಾಂಡ್ ಬಳಿ ಹೋಗಿ ಮಾತನಾಡಲಿ: ಡಿಸಿಎಂ ಡಿಕೆ ಶಿವಕುಮಾರ್
ಮೃತ ರಿಕ್ಷಾ ಚಾಲಕರನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ನಿವಾಸಿ ರಾಜು ಮತ್ತು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ರಾಮಕುಂಜ ನಿವಾಸಿ ದೇವರಾಜು ಎಂದು ಗುರುತಿಸಲಾಗಿದೆ.ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.
ರಿಕ್ಷಾ ಸ್ವಚ್ಚ ಗೊಳಿಸಲು ಹೊರಬಂದಿದ್ದ ರಾಜು,ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದರು. ಇದನ್ನು ಕಂಡ ದೇವರಾಜು ಅವರು ಗೋಣಿ ಚೀಲ ಹಿಡಿದು ರಕ್ಷಣೆಗೆ ಮುಂದಾಗಿದ್ದು, ಈ ವೇಳೆ ವಿದ್ಯುತ್ ಅಘಾತಕ್ಕೆ ಒಳಗಾಗಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹರೇಕಳ ಗ್ರಾಮದ ಹೃದಯ ಭಾಗವಾದ ನ್ಯೂಪಡ್ಪುವಿನ ರಾಜರಸ್ತೆಗೆ ತಾಗಿಕೊಂಡಿರುವ ತ್ವಾಹ ಜುಮಾ ಮಸೀದಿಯ ತಡೆಗೋಡೆ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಧಾರಕಾರ ಮಳೆಗೆ ತಡೆಗೋಡೆ ಗೋಡೆ ಶಿಥಿಲಗೊಂಡು ಕುಸಿದು ಬಿದ್ದಿದೆ. ತಡೆಗೋಡೆ ಕುಸಿದ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ, ಜನ ಸಂಚಾರವಿರದೇ ಸಂಭಾವ್ಯ ಬಾರಿ ದೊಡ್ಡ ಅನಾಹುತ ತಪ್ಪಿದೆ.
ಇದನ್ನೂ ಓದಿ : ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ:ಸಿಎಂ ಸಿದ್ದರಾಮಯ್ಯ
ಪುತ್ತೂರು ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು, ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡಿಲಗೊಂಡು ಮನೆಮೇಲೆ ಕುಸಿದು ಬಿದ್ದಿದೆ. ಮಜೀದ್ ಮತ್ತು ಮನೆ ಮಂದಿ ಮಲಗಿದ್ದ ಕೊಠಡಿಯ ಮೇಲೆ ಮಣ್ಣು ಕುಸಿದ ಪರಿಣಾಮ ಮನೆಯ ಅರ್ಧ ಭಾಗ ಕುಸಿದಿತ್ತು. ಈ ವೇಳೆ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದರು. ತಕ್ಷಣ ಮನೆಯಲ್ಲಿದ್ದ ಉಳಿದವರು ಮಕ್ಕಳನ್ನು ಮಣ್ಣಿನಡಿಯಿಂದ ಹೊರಗೆಳೆದು ಅಪಾಯವನ್ನು ತಪ್ಪಿಸಿದ್ದಾರೆ.
ಇನ್ನು ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಚೆಲ್ಯಡ್ಕ ಸೇತುವೆ ಮುಳುಗಡೆಗೊಂಡಿದೆ.ಪುತ್ತೂರಿನಿಂದ ಕುಂಜೂರುಪಂಜ ಪಾಣಾಜೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ. ಭಾರೀ ಮಳೆಯಿಂದಾಗಿ ಸೇತುವೆ ಮುಳುಗಡೆಯಾಗಿದ್ದುಹಲವು ಗ್ರಾಮಗಳನ್ನ ಸಂಪರ್ಕಿಸುತ್ತೆ ಈ ಸೇತುವೆ.
ಸೇತುವೆ ಮುಳುಗಡೆಯಿಂದಾಗಿ ಪ್ರಯಾಣಿಕರು ಹೈರಾಣಾಗಿದ್ದಾರೆ. ಅಜ್ಜಿಕಲ್ಲು, ದೇವಸ್ಯ ಭಾಗದ ಜನರಿಗೆ ಬಸ್ ಸಂಪರ್ಕಕ್ಕೆ ಸಮಸ್ಯೆ ಎದುರಾಯ್ತು.
ಇನ್ನು ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು,ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹೀಗಾಗಿ ಜನರು ಮುಂಜಾಗ್ರತೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.