ಬೆಂಗಳೂರು : ರಾಜ್ಯದಲ್ಲಿ ಮುಂದಿನ 24ಗಂಟೆಗಳಲ್ಲಿ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.ಮುಂದಿನ 48 ಘಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆ ಸಾಧ್ಯತೆ ಎಂದು ತಿಳಿಸಿದೆ.
ಇದನ್ನೂ ಓದಿ : ಅಂತ್ಯ ಸಂಸ್ಕಾರಕ್ಕೆ ಶಾಸಕ ಗುಬ್ಬಿ ಶ್ರೀನಿವಾಸ್ ಬರಬೇಕೆಂದು ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ.
ಕರಾವಳಿ ಹಾಗೂ ಉತ್ತರ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯಯಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸಾಧ್ಯತೆ. ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಮಾಹಿತಿ ನೀಡಿದೆ
ಡಿಸೆಂಬರ್ 10 ರ ಬೆಳಗ್ಗೆಯವರೆಗೆ ಬೆಂಗಳೂರಿನಲ್ಲಿ ಯಾವುದೇ ಬದಲಾವಣೆ ಇಲ್ಲ. 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ ಎಂದು ತಿಳಿಸಿದೆ.
ಇದನ್ನೂ ಓದಿ : “ಪ್ರಜಾತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ ಕೇಂದ್ರದ ಪ್ರಭುತ್ವಕ್ಕೆ ಕಾಲ ಉತ್ತರಿಸಲಿದೆ”
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.