ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ !

Karnataka Rain Alert : ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ. 

Written by - Ranjitha R K | Last Updated : Apr 18, 2024, 09:43 AM IST
  • ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ
  • ಈ ಜಿಲ್ಲೆಗಳಲ್ಲಿ ಎಡೆಬಿಡದೆ ಕಾಡಲಿದ್ದಾನೆ ಮಳೆರಾಯ
  • ಹವಾಮಾನ ಇಲಾಖೆ ನೀಡಿದೆ ಮುನ್ಸೂಚನೆ
 ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ !  ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ !  title=

ಬೆಂಗಳೂರು : Karnataka Rain: ಬಿಸಿಲಿನಿಂದ ತತ್ತರಿಸಿ ಹೋಗಿದ್ದ ರಾಜ್ಯದ ಜನತೆಗೆ ಸಮಾಧಾನಕಾರ ಸುದ್ದಿ ಇದು. ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಎಡೆಬಿಡದೆ ಮಳೆಯಾಗಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಇಂದು ಕರಾವಳಿ ಜಿಲ್ಲೆಗಳನ್ನ ಹೊರತುಪಡಿಸಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆ ಸೇರಿದಂತೆ  ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 

ಇದನ್ನೂ ಓದಿ :  ನಮ್ಮ ಗ್ಯಾರಂಟಿಗಳು ಜನರ ಬದುಕನ್ನು ಉತ್ತಮಪಡಿಸುತ್ತಿವೆ-ಸಚಿವ ಎಂ.ಬಿ.ಪಾಟೀಲ್

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ ಕೊಡಗು, ಮಂಡ್ಯ, ಮೈಸೂರು, ರಾಮನಗರ ತುಮಕೂರು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಸಾಧ್ಯತೆ ಇದೆ.  

ಏಪ್ರಿಲ್ 19ರಂದು ಅಂದರೆ ನಾಳೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಸನ, ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಕೂಡಾ  ಭಾರೀ ಮಳೆಯಾಗುವ ಸಂಭವ ಇದೆ.  

ಇದನ್ನೂ ಓದಿ :  PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!

ಏಪ್ರಿಲ್ 20 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ ಹಾಸನದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News