ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 48 ಗಂಟೆಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ (Heavy Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ : Rain : ಚಳಿ ಇರಬೇಕಾದ ಹೊತ್ತಲ್ಲಿ ಭರ್ಜರಿ ಮಳೆ..! ಯಾಕೆ ಹೀಗಾಯ್ತೋ..?
ಇದಲ್ಲದೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು (Mysore), ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಳಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆ (Rain) ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : 'ರಾಜ್ಯದಲ್ಲಿ 'ಕೋಳಿ ಮೊಟ್ಟೆ', 'ಮಾಂಸ' ಮಾರಾಟಕ್ಕೆ ನಿರ್ಬಂಧ ಇಲ್ಲ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.