Heavy Rainfall : ರಾಜ್ಯದಲ್ಲಿ ಇಂದಿನಿಂದ ಜು.12 ರವರೆಗೆ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಇಂದಿನಿಂದ  ಜು.12ರವರೆಗೆ ರಾಜ್ಯ ಮಾತ್ರವಲ್ಲದೇ, ಮಹಾರಾಷ್ಟ್ರ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ, ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ.

Last Updated : Jul 10, 2021, 08:35 AM IST
  • ಇಂದಿನಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ
  • ಶೇ.94 -106 ರಷ್ಟು ಜುಲೈ ತಿಂಗಳಲ್ಲಿ ಮಳೆಯಾಗಲಿದೆ
  • ಕರಾವಳಿ ಮತ್ತು ಕೊಡಗು ರೆಡ್​ ಆಲರ್ಟ್ ಘೋಷಣೆ ಮಾಡಲಾಗಿದೆ
Heavy Rainfall : ರಾಜ್ಯದಲ್ಲಿ ಇಂದಿನಿಂದ ಜು.12 ರವರೆಗೆ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ title=

ಬೆಂಗಳೂರು : ಇಂದಿನಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು  ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಪಶ್ಚಿಮ ಮತ್ತು ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಕೊಡಗಿನಲ್ಲಿ ಭಾರೀ ಮಳೆ(Heavy Rainfall)ಯಾಗಲಿದೆ.

ಇದನ್ನೂ ಓದಿ : Zika Virus Alert! ಜಿಕಾ ವೈರಸ್ ರೋಗಲಕ್ಷಣಗಳು, ಗರ್ಭಿಣಿ ಮಹಿಳೆಯರಿಗೆ ವಿಶೇಷ ಸಲಹೆ

ರಾಜ್ಯದ ಪಶ್ಚಿಮ ಘಟ್ಟ - ಮಲೆನಾಡನ್ನು ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆಯಾಗಿದೆ. ಇನ್ನೂ ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗಿದ್ದರೂ ಆ ಮಳೆ ಮುಂದುವರೆದಿಲ್ಲ. ಆದರೆ, ನೈರುತ್ಯ ಮುಂಗಾರು ಮತ್ತೆ ಮಳೆ ತರಲಿದೆ ಎಂದು ಹವಾಮಾನ ಇಲಾಖೆ(Indian Meteorological Department) ಮಾಹಿತಿ ನೀಡಿದೆ.

ಇದನ್ನೂ ಓದಿ : ದ್ವಿತೀಯ PU ವಿದ್ಯಾರ್ಥಿಗಳ ಗಮನಕ್ಕೆ :  KCET-2021 ಅರ್ಜಿ ಸಲ್ಲಿಕೆ ದಿನಾಂಕ ಮತ್ತೆ ವಿಸ್ತರಣೆ!

ಇಂದಿನಿಂದ  ಜು.12ರವರೆಗೆ ರಾಜ್ಯ ಮಾತ್ರವಲ್ಲದೇ, ಮಹಾರಾಷ್ಟ್ರ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ, ಮತ್ತು ಕೇರಳದಲ್ಲಿ ಭಾರೀ ಮಳೆ(Rainfall)ಯಾಗಲಿದೆ. ಸತತ ಮಳೆಯು ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕರಾವಳಿಯ ಗರಿಷ್ಠ ತಾಪಮಾನ ಕಡಿಮೆಯಾಗಿದೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ನದಿ ಕೆರೆ ಕಟ್ಟೆಗಳು ಭರ್ತಿಯಾಗಿದ್ದು, ಕೃಷಿಕರಲ್ಲಿ ಹರ್ಷ ವ್ಯಕ್ತವಾಗಿದೆ.

ಇದನ್ನೂ ಓದಿ : MB Patil : ಸಿಎಂ ಬಿಎಸ್‍ವೈ ಭೇಟಿಯಾದ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್

ಮುಂದಿನ ನಾಲ್ಕೈದು ದಿನಗಳಲ್ಲಿ ಮುಂಗಾರು ಚುರುಕಾಗುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.  ಶೇ.94 -106 ರಷ್ಟು ಜುಲೈ ತಿಂಗಳಲ್ಲಿ ಮಳೆಯಾಗಲಿದೆ. ಆಗ ದೇಶಾದ್ಯಂತ ಮಳೆ(Rain)ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : DL-RC Book : ವಾಹನ ಸವಾರರಿಗೆ ಸಿಹಿ ಸುದ್ದಿ : ಸವಾರರು ಇನ್ಮುಂದೆ DL, RC ಕೊಂಡೊಯ್ಯಬೇಕಿಲ್ಲ

ಕರಾವಳಿ ಮತ್ತು ಕೊಡಗು ಭಾಗದಲ್ಲಿ 'ರೆಡ್​ ಆಲರ್ಟ್'(Red Alert ) ಘೋಷಣೆ ಮಾಡಲಾಗಿದೆ. ​ಮುಂಗಾರು ಮಳೆ ಬಿರುಸು ಪಡೆಯುವ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಈಗಾಗಲೇ ಕೊಡಗಿನಲ್ಲಿ 'ರೆಡ್​ ಆಲರ್ಟ್​' ಘೋಷಿಸಿದ್ದು, ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಜು. 12ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News