Heavy Rainfall : ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಇಂದು ನಾಳೆ ಸಹ  ರಾಜ್ಯದಲ್ಲಿ ಭಾರೀ ಮಳೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದಿಂದಲೇ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

Last Updated : Jul 6, 2021, 09:11 AM IST
  • ರಾಜ್ಯದ ವಿವಿಧೆಡೆ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ
  • ರಾತ್ರಿ 1 ಗಂಟೆಗೆ ಆರಂಭವಾದ ಮಳೆ ಮುಂಜಾನೆವರೆಗೂ ಸುರಿದಿದೆ
  • ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಯಲ್ಲೋ ಅಲರ್ಟ್ ಘೋಷಣೆ
Heavy Rainfall : ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ title=

ಬೆಂಗಳೂರು : ರಾಜ್ಯದ ವಿವಿಧೆಡೆ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ರಾತ್ರಿ 1 ಗಂಟೆಗೆ ಆರಂಭವಾದ ಮಳೆ ಮುಂಜಾನೆವರೆಗೂ ಸುರಿದಿದೆ. ಇನ್ನೂ ಮಲೆನಾಡು ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದಲ್ಲೂ ಉತ್ತಮ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಇಂದು ನಾಳೆ ಸಹ  ರಾಜ್ಯದಲ್ಲಿ ಭಾರೀ ಮಳೆ(Heavy Rainfall) ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದಿಂದಲೇ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : Religious Places: ರಾಜ್ಯದಲ್ಲಿ ಇಂದಿನಿಂದ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಲು ಸರ್ಕಾರದ ಗ್ರೀನ್ ಸಿಗ್ನಲ್

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ನಾಳೆಯವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಯಲ್ಲೋ ಅಲರ್ಟ್(Yellow Alert) ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : ಮೇಕೆ ದಾಟು ಯೋಜನೆಗೆ ಅಡ್ಡಿ ಬೇಡ : ತಮಿಳುನಾಡಿಗೆ ಪತ್ರ ಬರೆದ ಯಡಿಯೂರಪ್ಪ

ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(India Meteorological Department) ನೀಡಿದ್ದಾರೆ. 

ಇದನ್ನೂ ಓದಿ : Karnataka Unlock 3.O : ರಾಜ್ಯದಲ್ಲಿ ಅನ್ ಲಾಕ್ 3.O : ಏನಿದೆ, ಏನಿಲ್ಲ?

ನಾಲ್ಕೈದು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿತ್ತು. ಈ ಭಾಗದಲ್ಲಿ ಇಂದಿನಿಂದ ಮಳೆ ಕೊಂಚ ಕಡಿಮೆಯಾಗಲಿದೆ. ಕರ್ನಾಟಕ(Karnataka)ದ ದಕ್ಷಿಣ ಒಳನಾಡಿನಲ್ಲಿಯೂ ಇನ್ನು ಮೂರು ದಿನ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಇಂದು ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದೆ. ನೈಋತ್ಯ ಮುಂಗಾರು ದುರ್ಬಲವಾದ್ದರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News