Heavy Rainfall : ಇನ್ನೆರಡು ದಿನ ರಾಜ್ಯದೆಲ್ಲೆಡೆ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್'

ಗುರುವಾರ ರಾತ್ರಿಯಿಂದಲೇ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಜೂನ್ 6 ರವರೆಗೂ ಹೆಚ್ಚಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು

Last Updated : Jun 5, 2021, 10:01 AM IST
  • ಗುರುವಾರ ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಮರುದಿನವೇ
  • ರಾಜ್ಯದ ಕರಾವಳಿಗೆ ಎಂಟ್ರಿ ಕೊಟ್ಟ ಮುಂಗಾರು
  • ಇನ್ನೆರಡು ದಿನಗಳಲ್ಲಿ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ
Heavy Rainfall : ಇನ್ನೆರಡು ದಿನ ರಾಜ್ಯದೆಲ್ಲೆಡೆ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' title=

ಬೆಂಗಳೂರು : ಗುರುವಾರ ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಮರುದಿನವೇ ರಾಜ್ಯದ ಕರಾವಳಿಗೆ ಎಂಟ್ರಿ ಕೊಟ್ಟಿವೆ. ಇನ್ನೆರಡು ದಿನಗಳಲ್ಲಿ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಗುರುವಾರ ರಾತ್ರಿಯಿಂದಲೇ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಜೂನ್ 6 ರವರೆಗೂ ಹೆಚ್ಚಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ನೀಡಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಕಾರಣ 'ರೆಡ್ ಅಲರ್ಟ್' ಘೋಷಿಸಲಾಗಿದೆ.

ಇದನ್ನೂ ಓದಿ : 'KSRTC' ಟ್ರೇಡ್ ಮಾರ್ಕ್ ರದ್ದುಗೊಳಿಸಿದ್ದಕ್ಕೆ ಕೆಎಸ್‌ಆರ್‌ಟಿಸಿ' ಹೇಳಿದ್ದೇನು?

ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್(Orange Alert). ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಚಿಕ್ಕಮಗಳೂರು, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ : Krishna Raja Wadiyar IV Birth Anniversary: ಕರ್ನಾಟಕಕ್ಕೆ ನೀಡಿದ ಅವರ ಕೊಡುಗೆಗಳು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News