ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ; ಯಲ್ಲೋ ಅಲರ್ಟ್ ಘೋಷಣೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ.

Last Updated : Sep 24, 2019, 08:49 AM IST
ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ; ಯಲ್ಲೋ ಅಲರ್ಟ್ ಘೋಷಣೆ title=
File Image

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಹಲವು ಭಾಗಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಮುಂದಿನ 48 ಗಂಟೆ ಸಿಲಿಕಾನ್ ಸಿಟಿಯಲ್ಲಿ ಬಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.  ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 27ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ಲಭ್ಯವಾಗಿದೆ.

ಈಗಾಗಲೇ ನಿನ್ನೆ ರಾತ್ರಿಯಿಂದ ಬೆಂಗಳೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯ ರಾಜಧಾನಿಯ ಜನ ತತ್ತರಿಸಿದ್ದಾರೆ. ನಗರದ ಮಲ್ಲೇಶ್ವರಂ, ಯಶವಂತಪುರ, ಹೆಬ್ಬಾಳ, ಮತ್ತಿಕೆರೆ, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್, ಜಾಲಹಳ್ಳಿ ಕ್ರಾಸ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ.
 

Trending News