ಕೊಡಗಿನಲ್ಲಿ ಪ್ರವಾಹ; ಸಂತ್ರಸ್ತರ ರಕ್ಷಣೆಗೆ ಸಹಾಯವಾಣಿ ಆರಂಭ

ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ.

Last Updated : Aug 17, 2018, 01:51 PM IST
ಕೊಡಗಿನಲ್ಲಿ ಪ್ರವಾಹ; ಸಂತ್ರಸ್ತರ ರಕ್ಷಣೆಗೆ ಸಹಾಯವಾಣಿ ಆರಂಭ title=

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂದುವರೆದ ಭಾರೀ ಮಳೆಯಿಂದಾಗಿ ಎಲ್ಲೆಡೆ ಪ್ರವಾಹ ಉಂಟಾಗಿದ್ದು, ಅತಿ ಹೆಚ್ಚು ಪ್ರವಾಹ ಪೀಡಿತವಾಗಿರುವ ಕೊಡಗಿನಲ್ಲಿ ಮೃತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮತ್ತೊಂದೆಡೆ ಪ್ರವಾಹದಲ್ಲಿ ಸಿಲುಕಿರುವವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ.

ಕೊಡಗಿನ ನಾಪೋಕ್ಲು, ಅಯ್ಯಂಗೇರಿ, ಭಾಗಮಂಡಲ, ಚೆಟ್ಟಿಮಾನಿ ವ್ಯಾಪ್ತಿಯ ಗ್ರಾಮಗಳಲ್ಲಿ ಭಾರಿ ಮಳೆಯಾಗುತ್ತಿದೆ. ಗುರುವಾರ ಸ್ವಲ್ಪ ಬಿಡುವು ನೀಡಿದ್ದ ಮಳೆ ಮತ್ತೆ ಚುರುಕಾಗಿದ್ದು, ಜಿಲ್ಲೆಯ ಜನಜೀವನ ಸಂಪೂರ್ಣವಾಗಿ ಅಸ್ತವ್ಯವಸ್ತವಾಗಿದೆ. ಕೇರಳಕ್ಕೆ ಹೋಗುವ ಹೆದ್ದಾರಿ ಕೂಡ ಬಂದ್ ಆಗಿದೆ. ಈ ಸಂದರ್ಭದಲ್ಲಿ ಯಡಕುಮೇರಿಯಲ್ಲಿ 16 ಮಂದಿ ರೈಲ್ವೆ ಸಿಬ್ಬಂದಿಗಳು ಅಪಾಯದಲ್ಲಿ ಸಿಲುಕಿದ್ದು ಅವರನ್ನು ರಕ್ಷಿಸಲು ಟ್ರಕ್ಕಿಂಗ್ ಪರಿಣತರೊಂದಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.

ಜಿಲ್ಲೆಯಲ್ಲಿ ಪರಿಹಾರ ಕಾರ್ಯಾಚರಣೆ ತೀವ್ರಗೊಳಿಸುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದ್ದು, ಸಹಾಯಕ್ಕಾಗಿ ಈ ಸಂಖ್ಯೆಗಳಿಗೆ ಕರೆ ಮಾಡಿ ಸಹಾಯ ಪಡೆಯಬಹುದು.

Trending News