ಕೊಪ್ಪಳ : ತಾಲ್ಲೂಕಿನ ದದೇಗಲ್‌ನಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆ ಅಡಿಯಲ್ಲಿ ಎಸ್.ಎಸ್.ಎಸಲ್.ಸಿ, ಐ.ಟಿ.ಐ, ಡಿಪ್ಲೋಮಾ, ಬಿ.ಇ ಮುಗಿಸಿರುವ ವಿದ್ಯಾರ್ಥಿಗಳಿಗೆ ಟರ್ನರ್, ಮಿಲ್ಲರ್, ಗ್ರಿಂಡರ್, ಸಿಎನ್‌ಸಿ, ಟೂಲ್‌ರೂಂ ಮಷಿನಿಷ್ಟ್, ಡಿಸೈನ್ ಸಾಫ್ಟ್ವೇರ್(ಮೆಕ್ಯಾನಿಕಲ್) ಕೋರ್ಸುಗಳಿಗೆ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಸಾನಿಯಾ ಮಿರ್ಜಾ ಅಭಿಮಾನಿಗಳಿಗೆ ಶಾಕ್! ನಿವೃತ್ತಿಯ ನಿರ್ಧಾರ ಪ್ರಕಟಿಸಿದ ಟೆನಿಸ್ ತಾರೆ
ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದ್ದು, ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಯೋಜನೆಯ ಅನುಸಾರ ಪ್ರಮಾಣ ಪತ್ರ ನೀಡಲಾಗುವುದು. ಹಾಗೂ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಅಡಿಯಲ್ಲಿ ತರಬೇತಿ ಹೊಂದುವ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯವನ್ನು ಅಥವಾ ಕೇಂದ್ರದ ಪ್ರಾಂಶುಪಾಲರಾದ ಸುರೇಶ್ ರಾಥೋಡ್-9902556110, 9945846240 ಗೆ ಸಂಪರ್ಕಿಸಬಹುದು ಎಂದು ಕೇಂದ್ರದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Viral Video: ‘ಪುಷ್ಪ’ ಸಿನಿಮಾದ ಮತ್ತೊಂದು ಹಾಡಿಗೆ ಮಸ್ತ್ ಡ್ಯಾನ್ಸ್ ಮಾಡಿದ ತಾಂಜಾನಿಯಾದ ಯುವಕ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.