/kannada/photo-gallery/biggboss-11-first-elimination-yamuna-srinidhi-husband-and-children-249346 ಬಿಗ್‌ಬಾಸ್‌ ಮನೆಯಿಂದ ಮೊದಲು ಔಟ್‌  ಆದ ಯಮುನಾ ಶ್ರೀನಿಧಿ ಅವರ ಪತಿ ಹಾಗೂ ಮಕ್ಕಳು ಯಾರು ಗೊತ್ತಾ?ಇವರು ಕೂಡ ಫೇಮಸ್‌ ಬಿಗ್‌ಬಾಸ್‌ ಮನೆಯಿಂದ ಮೊದಲು ಔಟ್‌ ಆದ ಯಮುನಾ ಶ್ರೀನಿಧಿ ಅವರ ಪತಿ ಹಾಗೂ ಮಕ್ಕಳು ಯಾರು ಗೊತ್ತಾ?ಇವರು ಕೂಡ ಫೇಮಸ್‌ 249346

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ನೇಜಾರು ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯ ಸ್ಥಳ ತನಿಖೆ ಸಂದರ್ಭ ಅಕ್ರಮ ಕೂಟ ಸೇರಿಕೊಂಡು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

Written by - Manjunath N | Last Updated : Dec 17, 2023, 06:41 PM IST
  • ಇದನ್ನು ಪ್ರಶ್ನಿಸಿ ಎಪಿಸಿಆರ್‌ನ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಮುಹಮ್ಮದ್ ನಿಯಾಝ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು
  • ವಿಚಾರಣೆ ನಡೆಸಿದ ಹೈಕೋರ್ಟ್ ಈ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ title=

ಉಡುಪಿ: ನೇಜಾರು ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯ ಸ್ಥಳ ತನಿಖೆ ಸಂದರ್ಭ ಅಕ್ರಮ ಕೂಟ ಸೇರಿಕೊಂಡು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಇದನ್ನೂ ಓದಿ: ಐಶ್ವರ್ಯಾ ರೈ ಅಭಿಷೇಕ್​ ಬಚ್ಚನ್ ಗಿಂತ ಎಷ್ಟು ವರ್ಷ ದೊಡ್ಡವರು ಗೊತ್ತೇ!

ನ.16ರಂದು ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನು ಕೃತ್ಯ ನಡೆದ ಸ್ಥಳದಲ್ಲಿ ತನಿಖೆಗಾಗಿ ಕರೆದುಕೊಂಡು ಬಂದಿದ್ದು, ತನಿಖೆ ಪ್ರಕ್ರಿಯೆ ಮುಗಿಸಿ ವಾಪಸ್ಸು ಆರೋಪಿಯನ್ನು ಇಲಾಖಾ ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸುಮಾರು 30 ರಿಂದ 40 ಮಂದಿ ಅಕ್ರಮ ಕೂಟ ಸೇರಿಕೊಂಡು ಇಲಾಖಾ ವಾಹನವನ್ನು ಅಡ್ಡ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವು ದಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 143, 147, 341, 186 ಜೊತೆಗೆ 149 ಐಪಿಸಿಯಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್‌ ಅಹಿಂಸಾ ವಿರುದ್ದ FIR ದಾಖಲು!

ಇದನ್ನು ಪ್ರಶ್ನಿಸಿ ಎಪಿಸಿಆರ್‌ನ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಮುಹಮ್ಮದ್ ನಿಯಾಝ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಈ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.