ಹಳ್ಳಿಹಕ್ಕಿ ಹೆಚ್ ವಿಶ್ವಾನಾಥ್ ‘ಬಿಗ್ ಶಾಕ್' ನೀಡಿದ ಹೈಕೋರ್ಟ್!

ಹೆಚ್ ವಿಶ್ವಾನಾಥ್ ಗೆ ಸಚಿವ ಸ್ಥಾನ ನೀಡೋದಕ್ಕೆ ಅನರ್ಹರಾಗಿದ್ದಾರೆ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠ

Last Updated : Nov 30, 2020, 04:39 PM IST
  • ಹಳ್ಳಿಹಕ್ಕಿ ಹೆಚ್ ವಿಶ್ವಾನಾಥ್ ಗೆ ಬಿಗ್ ಶಾಕ್
  • ಹೆಚ್ ವಿಶ್ವಾನಾಥ್ ಗೆ ಸಚಿವ ಸ್ಥಾನ ನೀಡೋದಕ್ಕೆ ಅನರ್ಹರಾಗಿದ್ದಾರೆ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠ
  • ಆರ್ ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಗ್ರೀನ್ ಸಿಗ್ನಲ್
ಹಳ್ಳಿಹಕ್ಕಿ ಹೆಚ್ ವಿಶ್ವಾನಾಥ್ ‘ಬಿಗ್ ಶಾಕ್' ನೀಡಿದ ಹೈಕೋರ್ಟ್! title=

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಎ.ಹೆಚ್. ವಿಶ್ವನಾಥ್ ಅವರಿಗೆ ಹೈಕೋರ್ಟ್ ತಡೆಯೊಡ್ಡಿದೆ. ಚುನಾವಣೆಯಲ್ಲಿ ಸೋತು, ವಿಧಾನಪರಿಷತ್ ಗೆ ನಾಮನಿರ್ದೇಶನಗೊಂಡು ಸದಸ್ಯರಾದ ಕಾರಣ ಸಚಿವರಾಗಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವಾನಾಥ್(H Vishwanath) ಗೆ ಬಿಗ್ ಶಾಕ್ ನೀಡಿದೆ. ಅಲ್ಲದೇ ಆರ್ ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಬಿಗ್ ರಿಲೀಫ್ ನೀಡಿದೆ.

'ಗೋವಾ ಸಿಎಂ ಆರೋಪ ಸಾಬೀತಾದ್ರೆ ನಾನು ರಾಜೀನಾಮೆ ಕೊಡುತ್ತೇನೆ'

ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗಿಯ ಪೀಠವು, ಹೆಚ್ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ಅನರ್ಹರಾಗಿ, ಸೋತು ನಾಮನಿರ್ದೇಶನಗೊಂಡಿದ್ದಾರೆ. ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು. ಕಲಂ 164(1ಬಿ), 361 ಬಿ ಅಡಿ ವಿಶ್ವನಾಥ್ ಅನರ್ಹರು. ಹೀಗಾಗಿ 2021ರವರೆಗೆ ಸಚಿವರಾಗಲು ಅರ್ಹರಲ್ಲ ಎಂಬುದಾಗಿ ಮಹತ್ವದ ಆದೇಶ ನೀಡಿದೆ.

ಮುಸಲ್ಮಾನರಿಗೆ ಪಕ್ಷದ ಟಿಕೆಟ್ ನೀಡಲ್ಲ: ಸಚಿವ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಇನ್ನೂ ಆರ್.ಶಂಕರ್, ಎಂ.ಟಿ.ಬಿ ನಾಗರಾಜ್ ಅವರು ಚುನಾವಣೆಯಲ್ಲಿ ಆಯ್ಕೆಗೊಂಡು ಎಂ.ಎಲ್ ಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಸಚಿವರಾಗಲು ಯಾವುದೇ ಅಡೆತಡೆಯಿಲ್ಲ. ಆದ್ರೇ ಹೆಚ್ ವಿಶ್ವನಾಥ್ ನಾಮ ನಿರ್ದೇಶನಗೊಂಡಿರೋದು. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಅನರ್ಹರಾಗಿದ್ದಾರೆ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠವು ಅಭಿಪ್ರಾಯ ಪಟ್ಟಿದೆ. ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಗೆ ಬಿಗ್ ಶಾಕ್ ನೀಡಿದ್ದರೇ, ಆರ್ ಶಂಕರ್, ಎಂಟಿಬಿ ನಾಗರಾಜ್ ಗೆ ಬಿಗ್ ರಿಲೀಫ್ ನೀಡಿದೆ.

ಗ್ರಾ. ಪಂ. ಚುನಾವಣೆ: ಸಂಪುಟ ವಿಸ್ತರಣೆ ಮತ್ತೆ ಮುಂದಕ್ಕೆ!

Trending News